ಕಾಪು: ತಾಲೂಕಿನ ಕಾಪು ಪುರಸಭಾ ಚುನಾವಣೆ ಡಿಸೆಂಬರ್ ತಿಂಗಳ ಕೊನೆಗೆ ನಡೆಯಲಿರುವುದರಿಂದ ಎಸ್ಡಿಪಿಐ ಪಕ್ಷವು ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲು ತೀರ್ಮಾನಿಸಿ ಅಧಿಕ್ರತ ಅಭ್ಯರ್ಥಿಯನ್ನು ಘೋಷಿಸಿದೆ.
ಕಾಪು ಕೊಂಬಗುಡ್ಡೆಯಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಪಕ್ಷದ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ ಅಧಿಕ್ರತ ಅಭ್ಯರ್ಥಿಗಳ ಪ್ರಥಮ ಪಟ್ಟಿಯ ಹೆಸರನ್ನು ಘೋಷಿಸಿದರು.
ಅಭ್ಯರ್ಥಿ ಘೋಷಣೆ ಮಾಡಿ ಮಾತಾಡಿದ ಶಾಫಿ ಬೆಳ್ಳಾರೆಯವರು ಓಟು ಪಡೆಯುವಾಗ ಕಾಂಗ್ರೆಸ್ ಮತ್ತೆ ಬಿಜೆಪಿಗೆ ಸೇರ್ಪಡೆಗೊಳ್ಳುವ ಈ ಸಂದರ್ಭದಲ್ಲಿ ಜನತೆ ಪ್ರಜ್ಙಾವಂತಿಕೆಯಿಂದ ಮತ ಚಲಾಯಿಸಲು ಮತ್ತು ಈ ದೇಶದ ಅಲ್ಪಸಂಖ್ಯಾತ,ದಲಿತ ಸಮುದಾಯದಕ್ಕೆ ಕಾಂಗ್ರೆಸ್ ನಡೆಸಿದ ಅನ್ಯಾಯಗಳನ್ನು ಮರೆಯಬಾರದು ಎಂದು ತಿಳಿಹೇಳಿದರು.ಈ ಸಂದರ್ಭದಲ್ಲಿ ರಾಜ್ಯ ಸಮಿತಿ ಸದಸ್ಯ ಅಥಾವುಲ್ಲಾ ಜೋಕಟ್ಟೆ ಮಾತನಾಡಿ ಅಲ್ಪಸಂಖ್ಯಾತರು ಚುನಾವಣೆಗೆ ನಿಂತರೆ ಯಾರೂ ಮತ ಹಾಕುವುದಿಲ್ಲ ಎಂಬ ಕಾಂಗ್ರೆಸ್ ನಾಯಕರೋರ್ವರ ಮಾತನ್ನು ಪ್ರಸ್ತಾಪಿಸಿ ಅದೇ ಅಲ್ಪಸಂಖ್ಯಾತರ ಮತಗಳು ನೀವುಗಳು ಗೆಲ್ಲಲು ಬೇಕಾ ಎಂದು ಪ್ರಶ್ನಿಸಿದರು,ಜಿಲ್ಲಾ ಉಪಾಧ್ಯಕ್ಷ ಶಾಹಿದ್ ಅಲೀ ರವರು ಸಂದರ್ಭೋಚಿತವಾಗಿ ಮಾತನಾಡಿದರು.ಕಾರ್ಯಕ್ರದ ಅಧ್ಯಕ್ಷತೆಯನ್ನು ಕಾಪು ವಿಧಾನ ಸಭಾ ಅಧ್ಯಕ್ಷ ಹನೀಫ್ ಮೂಳೂರ್ ವಹಿಸಿದ್ದರು.ವೇದಿಕೆಯಲ್ಲಿ ಜಿಲ್ಲಾಧ್ಯಕ್ಷ ನಝೀರ್ ಅಹ್ಮದ್,ಫಹೀಮ್, ಇಬ್ರಾಹಿಂ ಉಚ್ಚಿಲ ಉಪಸ್ಥಿತರಿದ್ದರು.
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…