Featured

ಕಾಪು ಪುರಸಭಾ ಚುನಾವಣೆ : ಪಕ್ಷದ ವಿಪ್ ಉಲ್ಲಂಘಿಸಿದ ಸದಸ್ಯೆಯನ್ನು ಉಚ್ಚಾಟಿಸಿ ಕಾನೂನು ಕ್ರಮಕ್ಕೆ ಮುಂದಾದ SDPI – vishwanews24

ಕಾಪು ಪುರಸಭಾ ಚುನಾವಣೆ : ಪಕ್ಷದ ವಿಪ್ ಉಲ್ಲಂಘಿಸಿದ ಸದಸ್ಯೆಯನ್ನು ಉಚ್ಚಾಟಿಸಿ ಕಾನೂನು ಕ್ರಮಕ್ಕೆ ಮುಂದಾದ SDPI

ಕಾಪು :  ಪುರಸಭೆಯ ಎರಡನೇ ಅವಧಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದೆ. ಕಾಪು ಪುರಸಭೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಮೀಸಲಾತಿಯಲ್ಲಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನ ಎಸ್ಸಿ ಮೀಸಲಾತಿ ಘೋಷಣೆಯಾಗಿತ್ತು.

ಆದರೆ ಇಲ್ಲಿ SDPI ಮತ್ತುಕಾಂಗ್ರೆಸ್ ಪಕ್ಷಗಳಲ್ಲಿ ಎಸ್ಸಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿದ್ದರೆ, ಬಿಜೆಪಿಗೆ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಎಸ್ಸಿ ಅಭ್ಯರ್ಥಿಯೇ ಇರಲಿಲ್ಲ. ಆದರಿಂದ ಆರಂಭದಲ್ಲೇ ಕಾಂಗ್ರೆಸ್ ಮತ್ತು SDPI ನಾವು ಒಟ್ಟಾಗಿ ಒಂದು ಅಭ್ಯರ್ಥಿಯನ್ನು ಹಾಕಿ ಅರ್ಧ ಅರ್ಧ ಅವಧಿಯಾಗಿ ಅಧಿಕಾರ ಹಂಚಿಕೊಳ್ಳುವ ಎಂಬ ಉದ್ದೇಶದಿಂದ ಕಾಂಗ್ರೆಸ್ ಜೊತೆಗೆ ಹಲವು ದಿನಗಳಿಂದ ಮಾತುಕತೆಗೆ ಪ್ರಯತ್ನ ನಡೆಸುತ್ತಿದ್ದರೂ, ಯಾವುದೇ ನಾಯಕರು ಮಾತುಕತೆಗೆ ಸಿಗಲಿಲ್ಲ.

ಕಾಂಗ್ರೆಸ್ ನಾಯಕ ಸೊರಕೆ ಅವರು ನಮ್ಮೊಂದಿಗೆ ಯಾವುದೇ ಮಾತುಕತೆಗೆ ಮುಂದಾಗದಂತೆ ಇತರ ನಾಯಕರಿಗೆ ನಿರ್ದೇಶನ ನೀಡಿದ್ದರು. ಚುನಾವಣೆಯ ಕೊನೆ ಗಳಿಗೆಯಲ್ಲಿ ಬಿಜೆಪಿಯು 20 ನೇ ಗುಜ್ಜಿ ವಾರ್ಡಿನಿಂದ SDPI ಪಕ್ಷದಿಂದ ಪುರಸಭೆ ಸದಸ್ಯೆಯಾಗಿ ಆಯ್ಕೆಯಾಗಿದ್ದ ಸರಿತಾ ಶಿವಾನಂದ್ ಅವರನ್ನು ಅವರ ಸಹೋದರರನ್ನು ಬಳಸಿಕೊಂಡು (ಚುನಾವಣೆ ಸಂದರ್ಭದಲ್ಲಿ ಈ ಸಹೋದರನ್ನು ಎದುರಿಸಿ ಸರಿತಾ ಅವರು ಸ್ಪರ್ಧೆ ನಡೆಸಿದ್ದರು) ತನ್ನತ್ತ ಸೆಳೆದುಕೊಂಡು ಆಪರೇಷನ್ ಕಮಲ ಮಾಡಿ, ಅನೈತಿಕವಾಗಿ ತನ್ನ ಅಭ್ಯರ್ಥಿಯನ್ನಾಗಿ ಮಾಡಿದೆ. ಒಂದು ವೇಳೆ ಮಾತುಕತೆಗೆ ಕಾಂಗ್ರೆಸ್ ಹಠಮಾರಿತನ ಬಿಟ್ಟು ಬಿಜೆಪಿಯನ್ನು ಸೋಲಿಸಲು ಮುಂದಾಗಿದ್ದರೆ ಸರಿತಾ ಅವರು ಬಿಜೆಪಿ ಜೊತೆ ಸೇರುತ್ತಿರಲಿಲ್ಲ.

ಚುನಾವಣೆ ಸಂದರ್ಭದಲ್ಲಿ SDPI ಪಕ್ಷ ಬಿಜೆಪಿಯನ್ನು ಸೋಲಿಸುವ ಭಾಗವಾಗಿ ಕಾಂಗ್ರೆಸ್ ಗೆ ಬೆಂಬಲ ನೀಡಿ, ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಬೇಕು ಎಂದು ಆದೇಶಿಸಿ ತನ್ನ ಪಕ್ಷದ ಪುರಸಭಾ ಸದಸ್ಯರಿಗೆ ವಿಪ್ ಜಾರಿ ಮಾಡಿತ್ತು. ಆದರೆ ಸರಿತಾ ಶಿವಾನಂದ್ ಅವರು ಬಿಜೆಪಿಯ ಬೆಂಬಲ ಪಡೆದು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಿ ಪಕ್ಷದ ವಿಪ್ ಆದೇಶವನ್ನು ಉಲ್ಲಂಘನೆ ಮಾಡಿ ಪಕ್ಷ ವಿರೋಧಿಯಾಗಿ ನಡೆದುಕೊಂಡಿರುವುದು ಪಕ್ಷ ವಿರೋಧಿ ಚಟುವಟಿಕೆ ಮತ್ತು ವಿಶ್ವಾಸ ದ್ರೋಹ ದ ಪರಮಾವಧಿಯಾಗಿದೆ.

ಸರಿತಾ ಶಿವಾನಂದ್ ಅವರು ಪಕ್ಷ ವಿರೋಧಿಯಾಗಿ ಉಮೇದುದಾರಿಕೆ ಸಲ್ಲಿಸಿದ ಕೂಡಲೇ SDPI ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಬಾವ ಅವರು ಪಕ್ಷದ ವಿಪ್ ವಿರುದ್ಧವಾಗಿ ಉಮೇದುದಾರಿಕೆ ಸಲ್ಲಿಸಿದ್ದರಿಂದ ಉಮೇದುದಾರಿಕೆಯನ್ನು ತಿರಸ್ಕರಿಸಬೇಕೆಂದು ಚುನಾವಣಾಧಿಕಾರಿಗೆ ಮನವಿ ಸಲ್ಲಿಸಿದ್ದರು. ನಂತರ ಪಕ್ಷದ ವಿಪ್ ವಿರುದ್ಧ ನಡೆದ ಪುರಸಭಾ ಸದಸ್ಯೆ ಸರಿತಾ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲು ಪಕ್ಷದ ಜಿಲ್ಲಾ ಸಮಿತಿಯು ರಾಜ್ಯ ಸಮಿತಿಗೆ ಶಿಫಾರಸ್ಸು ಮಾಡಿದೆ. ಕೂಡಲೇ ವಿಪ್ ವಿರುದ್ಧ ಪಕ್ಷಕ್ಕೆ ದ್ರೋಹ ಬಗೆದ ವಿಚಾರದಲ್ಲಿ ಕಾನೂನು ಕ್ರಮ ನಡೆಸುವುದಾಗಿ ಪಕ್ಷವು ಪ್ರಕಟಣೆಯಲ್ಲಿ ತಿಳಿಸಿದೆ.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

16 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

17 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

17 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

17 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

21 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

22 hours ago