Featured

ಕಾಪು ಪುರಸಭೆ ಚುನಾವಣೆ ಫಲಿತಾಂಶ – ನವ ಕಾಪು ನಿರ್ಮಾಣದ ಬಿಜೆಪಿ ಸಂಕಲ್ಪಕ್ಕೆ ಗೆಲುವು : ಯಶ್ ಪಾಲ್ ಸುವರ್ಣ – Vishwanews24

ಕಾಪು ಪುರಸಭೆ ಚುನಾವಣೆ ಫಲಿತಾಂಶ – ನವ ಕಾಪು ನಿರ್ಮಾಣದ ಬಿಜೆಪಿ ಸಂಕಲ್ಪಕ್ಕೆ ಗೆಲುವು

ಎಸ್ ಡಿ ಪಿ ಐ ಗೆಲುವು ಅಡಳಿತ ವ್ಯವಸ್ಥೆಗೆ ಮಾರಕ..

ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತರ ಓಲೈಕೆಯ ನೀತಿ ಇದೀಗ ಕಾಂಗ್ರೆಸ್ ಪಕ್ಷಕ್ಕೆ ತಿರುಗುಬಾಣ..

ಯಶ್ ಪಾಲ್ ಸುವರ್ಣ – Vishwanews24

ಕಾಪು ಪುರಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು12 ವಾರ್ಡುಗಳಲ್ಲಿ ಗೆಲ್ಲಿಸಿ ಪೂರ್ಣ ಬಹುಮತ ನೀಡುವ ಮೂಲಕ ಮತದಾರರು ಬಿಜೆಪಿಯ ನವ ಕಾಪು ನಿರ್ಮಾಣದ ಸಂಕಲ್ಪಕ್ಕೆ ಶಕ್ತಿ ತುಂಬಿರುವುದಾಗಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ  ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಸರಕಾರದ ಜನಪರ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಪಕ್ಷದ ಪ್ರಣಾಳಿಕೆಯಲ್ಲಿ ಘೋಷಿಸಿರುವ ಯೋಜನೆಗಳು ಹಾಗೂ ಪುರಸಭೆಯಲ್ಲಿ ಸ್ವಚ್ಛ, ದಕ್ಷ  ಮತ್ತು ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ ಜನತೆ ಬಿಜೆಪಿಯನ್ನು ಬೆಂಬಲಿಸಿದ್ದಾರೆ.
ರಾಷ್ಟ್ರೀಯವಾದಿ ಚಿಂತನೆಯ ನಿಷ್ಠಾವಂತ  ಬಿಜೆಪಿ ಕಾರ್ಯಕರ್ತರ ಪರಿಶ್ರಮ ಹಾಗೂ ಪಕ್ಷದ ನಾಯಕರ ಸಾಮೂಹಿಕ ನೇತೃತ್ವದಲ್ಲಿ ಬಿಜೆಪಿಯ ಪ್ರಚಂಡ ಗೆಲುವಿನ ಮೂಲಕ  ಕಾಂಗ್ರೆಸ್ ಪಕ್ಷದ ವೈಫಲ್ಯ ಹಾಗೂ ಅಪಪ್ರಚಾರದ ಮೂಲಕ ಮಾಜಿ ಸಚಿವರ ಗೆಲುವಿನ ವ್ಯರ್ಥಪ್ರಯತ್ನಕ್ಕೆ ಮತದಾರರು ಸೂಕ್ತ ಉತ್ತರ ನೀಡಿದ್ದಾರೆ.
ಮುಂಬರುವ ದಿನಗಳಲ್ಲಿ ಕಾಪು ಪುರಸಭಾ ವ್ಯಾಪ್ತಿಯಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ನಿಟ್ಟಿನಲ್ಲಿ ಪಕ್ಷ ಕಾರ್ಯಪ್ರವೃತ್ತರಾಗಲಿದ್ದು ಕಾಪುವಿನ ಸಮಗ್ರ ಅಭಿವೃದ್ಧಿಗೆ ಪೂರಕವಾದ ಅಡಳಿತ ನೀಡುವಲ್ಲಿ ಬಿಜೆಪಿ ಯಶಸ್ವಿಯಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಸ್ ಡಿ ಪಿ ಐ ಗೆಲುವು ಅಡಳಿತ ವ್ಯವಸ್ಥೆಗೆ ಮಾರಕ
ರಾಷ್ಟ್ರವಿರೋಧಿ ಕೋಮುವಾದಿ ಚಿಂತನೆಯ ಎಸ್ ಡಿ ಪಿ ಐ  ಪಕ್ಷದ ಅಭ್ಯರ್ಥಿಗಳ ಗೆಲುವು ಆಡಳಿತ ವ್ಯವಸ್ಥೆಗೆ ಮಾರಕಗಿದ್ದು, ಹಲವಾರು ದೇಶ ವಿರೋಧಿ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿರುವ ಎಸ್ ಡಿ ಪಿ ಐ ಪಕ್ಷ   ರಾಜಕೀಯವಾಗಿ ಕರಾವಳಿ ಭಾಗದಲ್ಲಿ ನೆಲೆಕಂಡು ಕೊಳ್ಳುತ್ತಿರುವುದು ದುರದೃಷ್ಟಕರ.
ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತರ ಓಲೈಕೆಯ ನೀತಿ ಇದೀಗ ಕಾಂಗ್ರೆಸ್ ಪಕ್ಷಕ್ಕೆ ತಿರುಗುಬಾಣವಾಗಿದೆ.
Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

1 day ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

1 day ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

1 day ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

1 day ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

1 day ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

1 day ago