ಕಾಪು ಪುರಸಭೆ ಚುನಾವಣೆಯ 23 ಸ್ಥಾನಗಳಲ್ಲಿ 12 ಅಭ್ಯರ್ಥಿಗಳು ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಗಳಿಸಿರುವ ಬಿಜೆಪಿ ಗೆಲುವು ಐತಿಹಾಸಿಕ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹರ್ಷ ವ್ಯಕ್ತ ಪಡಿಸಿದ್ದಾರೆ.
ಬಿಜೆಪಿಗೆ ಬಹುಮತ ನೀಡಿದ ಕಾಪು ಪುರಸಭಾ ವ್ಯಾಪ್ತಿಯ ಮತದಾರರಿಗೆ ಹೃತ್ಪೂರ್ವಕ ವಂದನೆಗಳನ್ನು ಸಲ್ಲಿಸುವ ಜೊತೆಗೆ ಚುನಾವಣಾ ಗೆಲುವಿಗೆ ಹಗಲಿರುಳು ಶ್ರಮಿಸಿರುವ ಸಚಿವರು, ಸಂಸದರು, ಶಾಸಕರು, ಪಕ್ಷದ ಮುಖಂಡರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.
ಕಾಪುವನ್ನು ಮಾದರಿ ಪುರಸಭೆಯನ್ನಾಗಿ ರೂಪಿಸುವ ನಿಟ್ಟಿನಲ್ಲಿ ಕುಡಿಯುವ ನೀರು, ಒಳಚರಂಡಿ, ತ್ಯಾಜ್ಯ ನಿರ್ವಹಣೆ, ದಾರಿದೀಪ, ಮೀನು ಮಾರುಕಟ್ಟೆ ಮುಂತಾದ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ವಿಶೇಷ ಒತ್ತು ನೀಡಿ ಮುಂದಿನ 5 ವರ್ಷಗಳಲ್ಲಿ ನವ ಕಾಪು ನಿರ್ಮಾಣದ ಸಂಕಲ್ಪದೊಂದಿಗೆ ಅತ್ಯಂತ ಉತ್ತಮ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಕುಯಿಲಾಡಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…