ಕಾಪು, ಜು. 6: ಸ್ಥಳೀಯ ಪುರಸಭೆ ಚುನಾವಣೆ ಹಾಗೂ ಪಕ್ಷದ ಸಂಘಟನಾತ್ಮಕ ಚಟುವಟಿಕೆ ಬಗ್ಗೆ ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ ನಾಯಕ್ ಅಲೆವೂರು ಅಧ್ಯಕ್ಷತೆಯಲ್ಲಿ ಕಾಪು ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸಭೆಯಲ್ಲಿ ಭಾಗವಹಿಸಿ, ಪುರಸಭೆ ಚುನಾವಣಾ ಪೂರ್ವತಯಾರಿ ಬಗ್ಗೆ ಹಾಗೂ ಬೂತ್ ಮಟ್ಟದಲ್ಲಿ ಹಮ್ಮಿಕೊಳ್ಳಬೇಕಾಗಿರುವ ಅಗತ್ಯ ಕಾರ್ಯಕ್ರಮಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮುಂದಿನ ಚುನಾವಣೆ ಗೆಲ್ಲುವ ಕುರಿತ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲಾಯಿತು.
ಶಾಸಕ ಲಾಲಾಜಿ ಆರ್. ಮೆಂಡನ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ, ಕಾಪು ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಅನಿಲ್ ಶೆಟ್ಟಿ, ಗೋಪಾಲಕೃಷ್ಣ ರಾವ್, ಮಹಾ ಶಕ್ತಿಕೇಂದ್ರ ಅಧ್ಯಕ್ಷ ಸಂದೀಪ್ ಶೆಟ್ಟಿ, ಯೋಜನಾ ಪ್ರಾಧಿಕಾರ ಅಧ್ಯಕ್ಷ ಸುಧಾಮ ಶೆಟ್ಟಿ, ಕಾಪು ಪುರಸಭೆ ಉಸ್ತುವಾರಿ ಮಾಲಿನಿ ಶೆಟ್ಟಿ, ಬೂತ್ ಅಧ್ಯಕ್ಷರು, ಪುರಸಭಾ ಮಾಜಿ ಸದಸ್ಯರು, ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು ಇದ್ದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…