ಕಾಪು ಪುರಸಭೆ ಚುನಾವಣೆ: ವೇಳಾಪಟ್ಟಿ ಪ್ರಕಟ -Vishwanews24
ಕಾಪು ಪುರಸಭೆ ಚುನಾವಣೆ: ವೇಳಾಪಟ್ಟಿ ಪ್ರಕಟ -Vishwanews24
ಉಡುಪಿ, : ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ -2021 ಕ್ಕೆ ಸಂಬoಧಿಸಿದoತೆ, ಜಿಲ್ಲೆಯ ಕಾಪು ತಾಲೂಕಿನ ಕಾಪು ಪುರಸಭೆಯ 23 ವಾರ್ಡುಗಳಿಗೆ ಸಾರ್ವತ್ರಿಕ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗವು ವೇಳಾಪಟ್ಟಿಯನ್ನು ನಿಗಧಿಪಡಿಸಿ, ಅಧಿಸೂಚನೆ ಹೊರಡಿಸಿರುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ.
ನಾಮಪತ್ರಗಳನ್ನು ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನವಾಗಿದ್ದು, ಡಿ. 16 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಡಿ. 18 ಕೊನೆಯ ದಿನವಾಗಿದ್ದು, ಡಿ. 27 ರ ಬೆಳಗ್ಗೆ 7 ಗಂಟೆಯಿoದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಡಿ. 30 ರಂದು ಬೆಳಗ್ಗೆ 8 ರಿಂದ ತಾಲೂಕು ಕೇಂದ್ರ ಸ್ಥಳದಲ್ಲಿ ಮತ ಎಣಿಕೆ ಕಾರ್ಯವು ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
