ಕಾಪು : ಯಾವುದೇ ಮೂಲಭೂತ ಸೌಕರ್ಯಗಳ ಪೂರ್ವಸಿದ್ಧತೆ ಇಲ್ಲದೇ ಕೇವಲ ರಾಜಕೀಯ ಲಾಭದ ಲೆಕ್ಕಾಚಾರದಿಂದ ಕಾಪು ಪುರಸಭೆಯನ್ನು ಸೃಷ್ಠಿಸಿ 100 ಕೋಟಿ ರೂಪಾಯಿ ಅನುದಾನ ತರುತ್ತೇನೆಂದು ಎಲ್ಲೆಡೆ ಪುಕ್ಕಟೆ ಪ್ರಚಾರಗಿಟ್ಟಿಸಿಕೊಂಡು, ಯಾವುದೇ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಕೈಗೊಳ್ಳದೇ ಇರುವ ಮಾಜಿ ಸಚಿವ ಹಾಗೂ ಕಾಪು ಮಾಜಿ ಶಾಸಕ ವಿನಯ ಕುಮಾರ್ ಸೊರಕೆಯವರು ಕಾಪು ಪುರಸಭಾ ವ್ಯಾಪ್ತಿಯ ಮೂಲಭೂತ ಸೌಕರ್ಯಗಳ ಅವ್ಯವಸ್ಥೆಗೆ ಮೂಲ ಕಾರಣರಾಗಿದ್ದಾರೆ ಎಂದು ಜಿಲ್ಲಾ ಬಿಜೆಪಿ ತಿಳಿಸಿದೆ.
ಇಂದು ಗ್ರಾಮ ಪಂಚಾಯತ್, ಪುರಸಭೆ, ಪಟ್ಟಣ ಪಂಚಾಯತ್, ನಗರಸಭೆ, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಸಹಿತ ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಜನಪರ ಮತ್ತು ಅಭಿವೃದ್ಧಿಪರ ಆಡಳಿತವಿರುವ ಕಾಲಘಟ್ಟದಲ್ಲಿ ಕಾಪು ಪುರಸಭೆ ವ್ಯಾಪ್ತಿಯ ಸರ್ವತೋಮುಖ ಅಭಿವೃದ್ಧಿ ಬಿಜೆಪಿ ಆಡಳಿತದಿಂದ ಮಾತ್ರ ಸಾಧ್ಯ. ಈ ನಿಟ್ಟಿನಲ್ಲಿ ಕಾಪು ಪುರಸಭಾ ಚುನಾವಣಾ ಪ್ರಚಾರ ಕಾರ್ಯದಲ್ಲಿ ಸಚಿವರು, ಸಂಸದರು, ಶಾಸಕರು, ಪಕ್ಷದ ರಾಷ್ಟ್ರೀಯ, ಅಂತರ್ ರಾಜ್ಯ, ರಾಜ್ಯ, ಜಿಲ್ಲಾ ಮುಖಂಡರ ಸಹಿತ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಸಮರೋಪಾದಿಯಲ್ಲಿ ತೊಡಗಿಸಿಕೊಂಡಿದ್ದು, ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳ ಯಾವುದೇ ಅಪಪ್ರಚಾರಗಳ ಗಿಮಿಕ್ ಪ್ರಯೋಜನಕ್ಕೆ ಬಾರದು. ಅಭಿವೃದ್ಧಿಯ ಮೂಲ ಮಂತ್ರದೊಂದಿಗೆ ನಿರ್ದಿಷ್ಟ ಯೋಜನೆಗಳ ಅನುಷ್ಠಾನದ ಜೊತೆಗೆ ನವ ಕಾಪು ನಿರ್ಮಾಣದ ದೃಢ ಸಂಕಲ್ಪ ಹೊಂದಿರುವ ಬಿಜೆಪಿ ಈ ಚುನಾವಣೆಯಲ್ಲಿ ಪ್ರಬುದ್ಧ ಮತದಾರರ ಆಶೀರ್ವಾದದಿಂದ ಕಾಪು ಪುರಸಭೆಯ ಆಡಳಿತವನ್ನು ಬಹುಮತದಿಂದ ತನ್ನ ತೆಕ್ಕೆಗೆ ವಹಿಸಿಕೊಳ್ಳುವುದು ನಿಶ್ಚಿತ ಎಂದು ಬಿಜೆಪಿ ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…