ಕಾಪು: ಕಾಪು ಪುರಸಭೆ ಮುಖ್ಯಾಧಿಕಾರಿ ರಾಯಪ್ಪ ನೇತೃತ್ವದ ತಂಡ ಶನಿವಾರ ಸಂಜೆ ಪೇಟೆಯ ವಿವಿಧ ಅಂಗಡಿಗಳಿಗೆ ದಾಳಿ ನಡೆಸಿ ಸುಮಾರು 250 ಕೆ.ಜಿ.ಯಷ್ಟು ಪ್ಲಾಸ್ಟಿಕ್ ಚೀಲಗಳನ್ನು ವಶಕ್ಕೆ ಪಡೆದುಕೊಂಡಿದೆ.
ಉಡುಪಿ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಪುರಸಭೆ ವ್ಯಾಪ್ತಿಯಲ್ಲಿ ಕಡ್ಡಾಯ ಪ್ಲಾಸ್ಟಿಕ್ ನಿಷೇಧ ಕಾನೂನು ಜಾರಿಗೆ ತರಲಾಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಾಧಿಕಾರಿ ರಾಯಪ್ಪ ಅವರು ಆರೋಗ್ಯಾಧಿಕಾರಿ ಸಹಿತ ಪೌರ ಕಾರ್ಮಿಕರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದಾ ರೆ.
ಪುರಸಭೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಿ ಆದೇಶ ಹೊರಡಿಸ ಲಾಗಿದ್ದರೂ, ಅದನ್ನು ಉಲ್ಲಂಘಿಸಿ ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ಮಾಡಲಾಗಿದೆ. ಪ್ಲಾಸ್ಟಿಕ್ ಕೈಚೀಲಗಳನ್ನು ಬಳಸುತ್ತಿದ್ದ ಅಂಗಡಿಗಳ ಮಾಲಕರಿಂದ 3,000 ರೂ. ದಂಡ ಸಂಗ್ರಹಿಸಲಾಗಿದೆ ಎಂದು ಮುಖ್ಯಾಧಿಕಾರಿ ರಾಯಪ್ಪ ತಿಳಿಸಿದ್ದಾರೆ.
ಪ್ಲಾಸ್ಟಿಕ್ಚೀಲ ಬದಲಿಗೆ ಬಟ್ಟೆ ಚೀಲ ನೀಡಿದ ಮುಖ್ಯಾಧಿಕಾರಿ ಪೇಟೆಯ ವಿವಿಧೆಡೆ ಪ್ಲಾಸ್ಟಿಕ್ ವಿರುದ್ಧ ಕಾರ್ಯಾಚರಣೆ ನಡೆಸಿದ ಮುಖ್ಯಾಧಿಕಾರಿ, ಪ್ಲಾಸ್ಟಿಕ್ ಚೀಲಗಳಲ್ಲಿ ಸಾಮಗ್ರಿ ಕೊಂಡೊಯ್ಯುತ್ತಿದ್ದವರನ್ನು ನಿಲ್ಲಿಸಿ, ಅವರಿಗೆ ಬಟ್ಟೆ ಚೀಲಗಳನ್ನು ನೀಡಿ ಪ್ಲಾಸ್ಟಿಕ್ ಬಳಸದಂತೆ ಜಾಗೃತಿ ಮೂಡಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…