ಕಾಪು, : ಕಾಪು ಪುರಸಭಾ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದೆ.
ರಾಜ್ಯ ಸರ್ಕಾರದ ಸುತ್ತೋಲೆಯಂತೆ ಜಿಲ್ಲಾಧಿಕಾರಿಗಳು ಪ್ಲಾಸ್ಟಿಕ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಿದ್ದು, ಅದರಂತೆ ಪುರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕ, ಧಾರ್ಮಿಕ, ಶೈಕ್ಷಣಿಕ ಮತ್ತು ಇತರೆ ವಿಷಯಗಳ ಬಗ್ಗೆ ಬ್ಯಾನರ್ ಅಳವಡಿಸುವಾಗ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದೆ.
ಪ್ಲಾಸ್ಟಿಕ್ ಬದಲು ಪುರಸಭೆಯ ಪೂರ್ವಾನುಮತಿ ಪಡೆದು ಬಟ್ಟೆಯ ಬ್ಯಾನರ್ ಅಳವಡಿಸಬೇಕು. ಪ್ಲಾಸ್ಟಿಕ್ ಬ್ಯಾನರ್ ಅಳವಡಿಸಿದಲ್ಲಿ ಯಾವುದೇ ಮುನ್ಸೂಚನೆ ನೀಡದೆ ಪುರಸಭೆ ವತಿಯಿಂದ ಬ್ಯಾನರ್ ತೆರವುಗೊಳಿಸಲಾಗುವುದು. ಇದರಿಂದ ತಮಗೆ ಉಂಟಾಗುವ ತೊಂದರೆ, ನಷ್ಟಗಳಿಗೆ ಪುರಸಭೆ ಜವಾಬ್ದಾರರಲ್ಲ ಎಂದು ಪುರಸಭೆ ಮುಖ್ಯಾಧಿಕಾರಿ ರಾಯಪ್ಪ ರವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…