ಕಾಪು ಪುರಸಭೆ ಸದಸ್ಯ ಅರುಣ್ ಶೆಟ್ಟಿ ಪಾದೂರು ಒತ್ತಾಯ ದುರಸ್ತಿಗೊಳ್ಳುತ್ತಿರುವ ರಾಷ್ಟ್ರೀಯ ಹೆದ್ದಾರಿ 66 ದಾರಿದೀಪಗಳು- vishwanews24
ಕಾಪು ಪುರಸಭೆ ಸದಸ್ಯ ಅರುಣ್ ಶೆಟ್ಟಿ ಪಾದೂರು ಒತ್ತಾಯ ದುರಸ್ತಿಗೊಳ್ಳುತ್ತಿರುವ ರಾಷ್ಟ್ರೀಯ ಹೆದ್ದಾರಿ 66 ದಾರಿದೀಪಗಳು
ಕಾಪು: ಕಳೆದ ಕೆಲವು ಕಾಪು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಪುರಸಭಾ ಸದಸ್ಯರಾದ ಇವರು ರಾಷ್ಟ್ರೀಯ ಹೆದ್ದಾರಿ 66ರ ವಿವಿಧ ಸಮಸ್ಯೆಗಳು ಮತ್ತು ದುರಸ್ತಿ ಗೊಳ್ಳದ ವಿದ್ಯುತ್ ದೀಪಗಳನ್ನು ಸರಿಪಡಿಸುವಂತೆ ಆಗ್ರಹಿಸುತ್ತಿದ್ದರು. ಇದಕ್ಕೆ ಸ್ಪಂದಿಸಿದ ಮುಖ್ಯಾಧಿಕಾರಿ ಹಾಗೂ ಅಧ್ಯಕ್ಷರು ಮುಂದಿನ ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ವಹಣಾ ಸದಸ್ಯರನ್ನು ಕರೆದು ಸೂಕ್ತ ಸಮಾಲೋಚನೆ ನಡೆಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರು ಆ ಪ್ರಯುಕ್ತ ಇಂದು ರಾಷ್ಟ್ರೀಯ ಹೆದ್ದಾರಿ 66ರ ದಾರಿದೀಪಗಳು ದುರಸ್ತಿ ಕೆಲಸ ಸಾಗುತ್ತಿದ್ದು ಅಧಿಕಾರಿಗಳು ಹಾಗೂ ಕಾಮಗಾರಿಯ ಬೆನ್ನು ಬಿದ್ದು ಕೆಲಸ ಮಾಡಿಸುವ ಇಂತಹ ಜನಪತ್ರಿನಿಧಿಗಳ ಅಗತ್ಯವಿದೆ ಎಂಬ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದರು.


