ಕಾಪು: ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್.
ಕಾಪು: ಕೆಪಿಸಿಸಿ ನಿರ್ದೇಶನದಂತೆ ಡೀಸೆಲ್ ಪೆಟ್ರೋಲ್ ದರ ಏರಿಕೆ ಖಂಡಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಪು ಪೆಟ್ರೋಲ್ ಬಂಕ್ ಮುಂಭಾಗ ಪ್ರತಿಭಟನೆ ನಡೆಯಿತು.
ಈ ಸಂಧರ್ಭದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತಾಡಿ” ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೋವಿಡ್ ಸಮಯದಲ್ಲಿ ಯಾವ ಮುಲಾಜಿಯಿಲ್ಲದೆ ಪೆಟ್ರೋಲ್ ಡೀಸೆಲ್ ಗ್ಯಾಸ್ ವಿದ್ಯುತ್ ದರ ಏರಿಸುವ ಮುಖಾಂತರ ಗಾಯದ ಮೇಲೆ ಬರೆ ಹಾಕುವ ಕೆಲಸ ಬಿಜೆಪಿ ಮಾಡುತ್ತಿದೆ ,ಯುಪಿಎ ಸರ್ಕಾರದ ಅವಧಿಯಲ್ಲಿ ಪೈಸೆಯ ಬೆಲೆ ಏರಿಕೆಯಾದಗ ಗರಿ ಗರಿ ಸೀರೆ ಹಾಕಿಕೊಂಡು ರಸ್ತೆಯಲ್ಲಿ ಉರುಳಾಡಿದ ಸಂಸದೆ ಶೋಭಾ ಕರಂದ್ಲಾಜೆ ಎಲ್ಲಿ ಹೋಗಿದ್ದಾರೆ ಎಂದು ಪ್ರಶ್ನಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆಶೋಕ್ ಕುಮಾರ್ ಕೊಡವರು ಮಾತನಾಡಿ ” ಸರ್ಕಾರ ಕೇವಲ ಪೆಟ್ರೋಲ್ ಡೀಸೆಲ್ ದರ ಏರಿಸದೆ ದಿನಂಪ್ರತಿ ಬಳಸುವ ಎಲ್ಲಾ ಸಾಮಾಗ್ರಿಗಳ ದರ ಏರಿಸುವ ಮುಖಾಂತರ ಜನರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಮೋಸ ಮಾಡುತ್ತಿದೆ ಎಂದರು.
ಮಾಜಿ ಸಚಿವ ವಿನಯಕುಮಾರ್ ಸೊರಕೆ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಕೆಪಿಸಿಸಿ ಮುಖಂಡರಾದ ಎಂ.ಎ. ಗಫೂರ್, ನವೀನ್ ಚಂದ್ರ ಶೆಟ್ಟಿ, ಮಹಮ್ಮದ್ ಫಾರೂಖ್, ಪಕ್ಷದ ಮುಖಂಡರಾದ ಗೀತಾ ವಾಗ್ಲೆ, ಪ್ರಶಾಂತ್ ಜತ್ತನ್ನ, ರಮೀಜ್ ಹುಸೇನ್, ಶರ್ಫುದ್ದೀನ್ ಶೇಖ್, ವೈ. ಸುಧೀರ್ ಕುಮಾರ್, ಯು.ಸಿ. ಶೇಖಬ್ಬ, ಮಹಮ್ಮದ್ ಸಾಧಿಕ್ ದೀನಾರ್, ನವೀನ್ ಎನ್. ಶೆಟ್ಟಿ, ಶಶಿಧರ್ ಶೆಟ್ಟಿ, ಶೇಖರ್ ಕೋಟ್ಯಾನ್, ಅಬ್ದುಲ್ ಅಜೀಜ್, ಶಿವಾಜಿ ಸುವರ್ಣ, ಕೇಶವ ಹೆಜಮಾಡಿ, ಹಸನಬ್ಬ ಶೇಖ್, ಹರೀಶ್ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.
ವರದಿ: ಪೊಲಿಟಿಕಲ್ಬ್ಯು ರೋ ವಿಶ್ವನ್ಯೂಸ್24
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…