Featured

ಕಾಪು ಪೊಲೀಸರ ಕಾರ್ಯಾಚರಣೆ: ಇಬ್ಬರು ಅಂತರ್‌ಜಿಲ್ಲಾ ಸರಗಳ್ಳರ ಸೆರೆ – Vishwanews24

ಕಾಪು: ಕಳೆದ ಸೋಮವಾರಕುಂಜಾರುಗಿರಿ ಸಮೀಪದ ಪಾಜಕದಲ್ಲಿ ಮದುವೆ ಕಾರ್ಯಕ್ರಮಕ್ಕೆ ಹೋಗಿ ಮರಳುತ್ತಿದ್ದ ಬ್ರಾಹ್ಮಣರತೋಟ ನಿವಾಸಿ ಶಕುಂತಳಾ ಜಿ. ಭಟ್‌ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಸುಲಿಗೆ ನಡೆಸಿ ಪರಾರಿಯಾಗಿದ್ದ ಆರೋಪಿಗಳನ್ನು ಸೋಮವಾರ ಪಡುಬಿದ್ರಿಯಲ್ಲಿ ಬಂಧಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಕ್ಷಯ್‌ ಎಂ. ಹಾಕೆ ಮಚ್ಚೀಂದ್ರ ಅವರು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಬಿ.ಸಿ.ರೋಡ್‌ ಬಂಟ್ವಾಳ ನಿವಾಸಿ ಮಹಮ್ಮದ್‌ ರಫೀಕ್‌ (33) ಮತ್ತು ಸುರತ್ಕಲ್‌ ಚೊಕ್ಕಬೆಟ್ಟು ನಿವಾಸಿ ತೌಸಿಫ್ ಸಾಧಿಕ್‌ (31) ನನ್ನು ಬಂಧಿಸಲಾಗಿದೆ. ಅವರಿಂದ ಕೃತ್ಯಕ್ಕೆ ಬಳಸಿದ ಎವೆಂಜರ್‌ ಬೈಕ್‌, 3 ಮೊಬೈಲ್‌, 2,500 ರೂ. ನಗದು, ಬಟನ್‌ ಇದ್ದ ಎರಡು ಚೂರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

ಕಾರ್ಕಳ ಮತ್ತು ಉಡುಪಿ ಪೊಲೀಸ್‌ ಉಪಾಧೀಕ್ಷಕರು, ಕಾಪು ವೃತ್ತ ನಿರೀಕ್ಷಕ ಕೆ.ಸಿ. ಪೂವಯ್ಯ ಅವರ ನೇತೃತ್ವದಲ್ಲಿ ಹಿರಿಯಡಕ ಎಸ್‌ಐ ಮಂಜುನಾಥ ಮರಬಂದ ಹಾಗೂ ಅಪರಾಧ ವಿಭಾಗದ ಸಿಬಂದಿಗಳಾದ ಪ್ರವೀಣ್‌ ಕುಮಾರ್‌, ರಾಜೇಶ್‌, ನಾರಾಯಣ್‌, ಸಂದೇಶ್‌,ಆರ್‌ಡಿಸಿ ವಿಭಾಗದ ದಿನೇಶ್‌ ಮತ್ತು ನಿತಿನ್‌ ಅವರ ಕಾರ್ಯಾಚರಣೆಯಿಂದಾಗಿ ಸರಗಳ್ಳರ ಬಂಧನವಾಗಿದ್ದು ಪೊಲೀಸರಿಗೆ ನಗದು ಮತ್ತು ಪ್ರಶಂಸಾ ಪತ್ರ ನೀಡಿ ಗೌರವಿಸಲಾಗುವುದು ಎಂದರು.

 

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago