ಕಾಪು: ಕಳೆದ ಸೋಮವಾರಕುಂಜಾರುಗಿರಿ ಸಮೀಪದ ಪಾಜಕದಲ್ಲಿ ಮದುವೆ ಕಾರ್ಯಕ್ರಮಕ್ಕೆ ಹೋಗಿ ಮರಳುತ್ತಿದ್ದ ಬ್ರಾಹ್ಮಣರತೋಟ ನಿವಾಸಿ ಶಕುಂತಳಾ ಜಿ. ಭಟ್ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಸುಲಿಗೆ ನಡೆಸಿ ಪರಾರಿಯಾಗಿದ್ದ ಆರೋಪಿಗಳನ್ನು ಸೋಮವಾರ ಪಡುಬಿದ್ರಿಯಲ್ಲಿ ಬಂಧಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ. ಹಾಕೆ ಮಚ್ಚೀಂದ್ರ ಅವರು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಬಿ.ಸಿ.ರೋಡ್ ಬಂಟ್ವಾಳ ನಿವಾಸಿ ಮಹಮ್ಮದ್ ರಫೀಕ್ (33) ಮತ್ತು ಸುರತ್ಕಲ್ ಚೊಕ್ಕಬೆಟ್ಟು ನಿವಾಸಿ ತೌಸಿಫ್ ಸಾಧಿಕ್ (31) ನನ್ನು ಬಂಧಿಸಲಾಗಿದೆ. ಅವರಿಂದ ಕೃತ್ಯಕ್ಕೆ ಬಳಸಿದ ಎವೆಂಜರ್ ಬೈಕ್, 3 ಮೊಬೈಲ್, 2,500 ರೂ. ನಗದು, ಬಟನ್ ಇದ್ದ ಎರಡು ಚೂರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.
ಕಾರ್ಕಳ ಮತ್ತು ಉಡುಪಿ ಪೊಲೀಸ್ ಉಪಾಧೀಕ್ಷಕರು, ಕಾಪು ವೃತ್ತ ನಿರೀಕ್ಷಕ ಕೆ.ಸಿ. ಪೂವಯ್ಯ ಅವರ ನೇತೃತ್ವದಲ್ಲಿ ಹಿರಿಯಡಕ ಎಸ್‌ಐ ಮಂಜುನಾಥ ಮರಬಂದ ಹಾಗೂ ಅಪರಾಧ ವಿಭಾಗದ ಸಿಬಂದಿಗಳಾದ ಪ್ರವೀಣ್ ಕುಮಾರ್, ರಾಜೇಶ್, ನಾರಾಯಣ್, ಸಂದೇಶ್,ಆರ್‌ಡಿಸಿ ವಿಭಾಗದ ದಿನೇಶ್ ಮತ್ತು ನಿತಿನ್ ಅವರ ಕಾರ್ಯಾಚರಣೆಯಿಂದಾಗಿ ಸರಗಳ್ಳರ ಬಂಧನವಾಗಿದ್ದು ಪೊಲೀಸರಿಗೆ ನಗದು ಮತ್ತು ಪ್ರಶಂಸಾ ಪತ್ರ ನೀಡಿ ಗೌರವಿಸಲಾಗುವುದು ಎಂದರು.
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…