ಕಾಪು : ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬಂದಿ ಜ್ಯೋತಿ(32) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ಪತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತರನ್ನು ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ರವಿ ಕುಮಾರ್(35) ಎಂದು ಗುರುತಿಸಲಾಗಿದೆ. ಇವರು ಕೆಎಸ್‌ಆರ್‌ಟಿಸಿಯಲ್ಲಿ ಮೆಕ್ಯಾನಿಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. 2017ರಲ್ಲಿ ತನ್ನದೇ ಊರಿನ ಜ್ಯೋತಿಯನ್ನು ಮದುವೆಯಾಗಿದ್ದನು. ಜ್ಯೋತಿ ಕಾಪು ಠಾಣಾ ಸಿಬ್ಬಂದಿಯಾಗಿರುವುದರಿಂದ ಇವರಿಬ್ಬರು ಠಾಣಾ ಸಮೀಪದಲ್ಲೇ ಇರುವ ಪೊಲೀಸ್ ವಸತಿಗೃಹದಲ್ಲಿ ವಾಸವಾಗಿದ್ದರು.
ಜ್ಯೋತಿ ಆತ್ಮಹತ್ಯೆ ಮಾಡಿಕೊಂಡ ರೂಮಿನಲ್ಲಿ ಒಂದು ಡೈರಿ ಸಿಕ್ಕಿದ್ದು, ಅದರಲ್ಲಿ ತನ್ನ ಸಾವಿಗೆ ತನ್ನ ಗಂಡನ ಅನುಮಾನವೇ ಕಾರಣ ಎಂದು ಬರೆದಿದ್ದಾರೆ. ಈ ಹಿನ್ನಲೆ ಆಕೆಯ ತಾಯಿ ದೇವಮ್ಮ ವಿಟ್ಲಾಪುರ ನೀಡಿದ ದೂರಿನಂತೆ ಕಾಪು ಪೊಲೀಸ್ ಠಾಣೆಯಲ್ಲಿ ಕಲಂ 306, 498(ಎ) ಐಪಿಸಿಯಂತೆ ಪ್ರಕರಣ ದಾಖಲಾಗಿತ್ತು. ಪೊಲೀಸರು ಆರೋಪಿ ಪತಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…