ಕಾಪು ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ -ಭಯೋತ್ಪಾದನೆ ವಿರೋಧಿ ದಿನ ನಿಮಿತ್ತ-ಪ್ರತಿಜ್ಞಾ ವಿಧಿ ಬೋಧನೆ-vishwanews24

Featured, ಉಡುಪಿ

ಕಾಪು:    ಕಾಪು ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಭಯೋತ್ಪಾದನೆ ವಿರೋಧಿ ದಿನ ನಿಮಿತ್ತ ಸರ್ಕಲ್ ಇನ್ಸ್‌ಪೆಕ್ಟರ್ ಪ್ರಕಾಶ್ ಅವರು ಅವರು, ಎಲ್ಲ  ಸಿಬ್ಬಂದಿಗೆ ಗುರುವಾರ ಪ್ರತಿಜ್ಞಾ ವಿಧಿ ಬೋಧಿಸಿದರು.

ಅಹಿಂಸೆ ಹಾಗೂ ಸಹನೆಗೆ ಹೆಸರಾದ ನಮ್ಮ ರಾಷ್ಟ್ರದ ಭವ್ಯ ಪರಂಪರೆಯಲ್ಲಿ, ದಢ ವಿಶ್ವಾಸವುಳ್ಳ ಭಾರತದ ಪ್ರಜೆಗಳಾದ ನಾವು. ಎಲ್ಲ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ಶಕ್ತಿ, ಸಾಮರ್ಥ್ಯದಿಂದ ಎದುರಿಸುತ್ತೇವೆ. ಸಹಬಾಂಧವರಲ್ಲಿ ಶಾಂತಿ, ಸಾಮಾಜಿಕ ಸೌಹಾರ್ದತೆ ಮತ್ತು ಪರಸ್ಪರ ಅರಿವನ್ನು ಸಾಧಿಸಲು ಹಾಗೂ ಉತ್ತೇಜಿಸಲು ಅಲ್ಲದೇ ಮಾನವ ಜೀವಕ್ಕೆ ಹಾಗೂ ಮೌಲ್ಯಗಳಿಗೆ ಬೆದರಿಕೆಯೊಡ್ಡುತ್ತಿರುವ ವಿಚಿದ್ರಕಾರಿ ಶಕ್ತಿಗಳ ವಿರುದ್ಧ ಹೋರಾಡಲು ನಾವು ಪಣ ತೊಡುತ್ತೇವೆ ಎಂದು ಪ್ರತಿಜ್ಞಾ ವಿಧಿ ಸ್ವೀಕರಿಸಿದರು