ಬೆಳಗಾವಿ/ಕಾಪು: ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಉಡುಪಿ ಜಿಲ್ಲೆ ಮುಂಚೂಣಿಯಲ್ಲಿದ್ದು, 1 ಜಿಲ್ಲೆ 1 ತಾಣ ಅಭಿವೃದ್ಧಿಯಡಿ ಕಾಪು ಕ್ಷೇತ್ರದ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸರಕಾರ ಅನುದಾನ ಒದಗಿಸಬೇಕು ಎಂದು ಶಾಸಕ ಗುರ್ಮೆ ಶೆಟ್ಟಿ ಬೆಳಗಾವಿ ಸುವರ್ಣ ಸೌಧ’ದಲ್ಲಿ ನಡೆಯುತ್ತಿರುವ ಅಧಿವೇಶನದ ಸಂದರ್ಭ ಸದನದಲ್ಲಿ ಸರಕಾರಕ್ಕೆ ಮನವಿ ಮಾಡಿದ್ದಾರೆ.
ಕರ್ನಾಟಕ ವಿಧಾನಸಭೆ ಅಧಿವೇಶನದ ಚುಕ್ಕೆ ಗುರುತಿನ ಸಂಖ್ಯೆ 380 ರಡಿ ಈ ಕುರಿತು ರಾಜ್ಯ ಪ್ರವಾಸೋದ್ಯಮ, ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನಾ ಶಾಸ್ತ್ರ ಇಲಾಖೆಯ ಸಚಿವ ಹೆಚ್.ಕೆ.ಪಾಟೀಲ್ ಅವರಿಗೆ ಮನವಿ ಮಾಡುತ್ತಾ ನಾನು ಸತತ 3 ನೇ ಬಾರಿಗೆ ತಮ್ಮಲ್ಲಿ ಮನವಿ ಮಾಡುತ್ತಿದ್ದೇನೆ. ಕಾಪು ಕ್ಷೇತ್ರದಲ್ಲಿ ಮಾರಿಗುಡಿ, ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನ ಮತ್ತು ಅಂತರಾಷ್ಟ್ರೀಯ ಮನ್ನಣೆ ಪಡೆದ ಲೈಟ್ ಹೌಸ್, ಬ್ಲೂ ಫ್ಲಾಗ್ ಬೀಚ್ ಸಹಿತ ಹಲವಾರು ಧಾರ್ಮಿಕ ಮತ್ತು ಪ್ರವಾಸೋದ್ಯಮ ಸ್ಥಳಗಳಿವೆ. ಇಲ್ಲಿಗೆ ಪ್ರತಿನಿತ್ಯ ಸಾವಿರಾರು ಮಂದಿ ಪ್ರವಾಸಿಗರು ಬರುತ್ತಿದ್ದಾರೆ. 1 ಜಿಲ್ಲೆ 1 ತಾಣ ಯೋಜನೆಯಡಿ ಕಾಪು ಕ್ಷೇತ್ರವನ್ನು ನಿಗದಿಗೊಳಿಸಿ, ಪ್ರವಾಸಿ ತಾಣದ ಅಭಿವೃದ್ಧಿಗೆ 5 ಕೋಟಿ ಹಣ ಬಿಡುಗಡೆ ಮಾಡುವುದಾಗಿ ಪ್ರಥಮ ಅಧಿವೇಶನದಲ್ಲೇ ಭರವಸೆ ನೀಡಿದ್ದೀರಿ. ಇದುವರೆಗೂ ಹಣ ಬಿಡುಗಡೆ ಆಗಿಲ್ಲ. ಹಣ ಬಿಡುಗಡೆ ಮಾಡಿದರೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಅನುಕೂಲವಾಗುತ್ತದೆ. ಈ ಕುರಿತು ಕೇಂದ್ರ ಸರಕಾರಕ್ಕೂ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…