ಕಾಪು : ತಾಲೂಕು ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪದಿಂದ ಮಳೆ ಹಾನಿಗೊಳಗಾದ 43 ಕುಟುಂಬಗಳಿಗೆ 9.89 ಲಕ್ಷ ರೂ. ಪರಿಹಾರ ಪರಿಹಾರ ಚೆಕ್ ಮತ್ತು ಕಾಪು ಪುರಸಭೆ ವ್ಯಾಪ್ತಿಯ 12 ಕುಟುಂಬಗಳಿಗೆ ನೆರೆ ಪರಿಹಾರ ಮನೆ ನಿರ್ಮಾಣ ಮಂಜೂರಾತಿ ಪತ್ರವನ್ನು ಶಾಸಕ ಲಾಲಾಜಿ ಆರ್. ಮೆಂಡನ್ ಅವರು ವಿತರಿಸಿದರು.
ಈ ಸಂದರ್ಭ ಮಾತನಾಡಿದ ಅವರು, ತೌಖ್ತೆ ಚಂಡಮಾರುತ ಮತ್ತು ಮಳೆ ಹಾನಿಯಿಂದಾಗಿ ಕಾಪು ವಿಧಾನಸಭಾ ಕ್ಷೇತ್ರದ ವಿವಿಧೆಡೆ ಅಪಾರ ಹಾನಿಯುಂಟಾಗಿದ್ದು ಹಾನಿ ಪರಿಶೀಲನೆಗೆ ಕೇಂದ್ರದಿಂದಲೂ ನಿಯೋಗ ಆಗಮಿಸಿದೆ. ಪ್ರಾಕೃತಿಕ ವಿಕೋಪದಿಂದಾಗಿ ಹಾನಿಗೊಳಗಾದ ಪ್ರದೇಶಗಳಲ್ಲಿನ ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿಯನ್ನು ಸರಿಪಡಿಸಲು ಮತ್ತು ತೊಂದರೆಗೊಳಗಾದ ಕುಟುಂಬಗಳಿಗೆ ಗರಿಷ್ಠ ಪರಿಹಾರವನ್ನು ದೊರಕಿಸಿಕೊಡಲು ಪ್ರಯತ್ನಿಸಲಾಗುತ್ತಿದ್ದು, ಹಂತ ಹಂತವಾಗಿ ಪರಿಹಾರ ದೊರಕಿಸಿಕೊಡಲಾಗುವುದು ಎಂದರು.
ಉಡುಪಿ ಜಿ. ಪಂ. ಮಾಜಿ ಸದಸ್ಯೆ ಶಿಲ್ಪಾ ಜಿ. ಸುವರ್ಣ, ಕಾಪು ತಾ.ಪಂ. ಮಾಜಿ ಅಧ್ಯಕ್ಷೆ ಶಶಿಪ್ರಭಾ ಶೆಟ್ಟಿ, ಪಲಿಮಾರು ಗ್ರಾ.ಪಂ. ಅಧ್ಯಕ್ಷೆ ಗಾಯತ್ರಿ ಪ್ರಭು, ಬೆಳ್ಳೆ ಗ್ರಾ.ಪಂ. ಅಧ್ಯಕ್ಷ ಸುಧಾಕರ್ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರು, ಕಾಪು ತಾಲೂಕು ಉಪ ತಹಶೀಲ್ದಾರ್‌ರಾದ ರವಿಶಂಕರ್, ಅಶೋಕ್ ಕುಮಾರ್, ಕಂದಾಯ ನಿರೀಕ್ಷಕ ಸುಧೀರ್ ಕುಮಾರ್ ಶೆಟ್ಟಿ ಹಾಗೂ ಆಯಾ ಗ್ರಾಮಗಳ ಗ್ರಾಮ ಲೆಕ್ಕಾದಿಕಾರಿಗಳು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…