ಕಾಪು: ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ ನೇತ್ರತ್ವದಲ್ಲಿ ಹಿಂದಿ ದಿವಸ್ ಆಚರಣೆ ವಿರೋಧಿಸಿ ಕಾಪು ಪೇಟೆಯಲ್ಲಿ ಪ್ರತಿಭಟನೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಂಕಪ್ಪ ಎ ಮಾತನಾಡಿ ವೈವಿದ್ಯಮಯವಾದ ಸಂಸ್ಕೃತಿ ಭಾಷೆ ಮತ್ತು ಸಂಸ್ಕಾರವನ್ನು ಹೊಂದಿರುವ ಭಾರತದಲ್ಲಿ ಹಿ0ದಿ ಭಾಷೆಗೆ ಮಾತ್ರ ಪ್ರಾಮುಖ್ಯತೆ ಕೊಡುವ ಕೇಂದ್ರ ಸರಕಾರದ ನಿರ್ಧಾರ ಖಂಡನೀಯವಾಗಿದೆ.ಈ ಬಗ್ಗೆ ಜನರೆಲ್ಲರೂ ಜಾಗೃತರಾಗಬೇಕಿದೆ ಎಂದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ ಮಾತನಾಡಿ ರಾಜ್ಯದಲ್ಲಿ ಪ್ರಾದೇಶಿಕತೆಗೆ ಹೆಚ್ಚಿನ ಒತ್ತು ನೀಡಬೇಕಿದ್ದು,ಇಂತಹ ಸಂದರ್ಭದಲ್ಲಿ ಹಿಂದಿ ಭಾಷೆಗೆ ಪ್ರಾಮುಖ್ಯತೆ ನೀಡುತ್ತಿರುವುದು ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರಕಾರದ ಭಾಷಾ ವಿರೋಧಿ ಕೃತ್ಯವಾಗಿದೆ .ಆಯಾ ರಾಜ್ಯ ಜಿಲ್ಲೆ ಮತ್ತು ಸ್ಥಳೀಯ ಪ್ರದೇಶಗಳ ಭಾಷೆಗಳಿಗೆ ಒತ್ತು ನೀಡಿದ್ದಲ್ಲಿ ರಾಜ್ಯಕ್ಕೂ ದೇಶಕ್ಕೂ ಒಳಿತಾಗುತ್ತದೆ. ಹಿಂದೀ ಭಾಷೆಯನ್ನು ಹೇರುವ ಮೂಲಕ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆಯನ್ನು ಉಂಟು ಮಾಡಲಾಗುತ್ತಿದೆ.
ಇದರ ವಿರುದ್ಧ ಸಂಘಟಿತ ಹೋರಾಟ ನಡೆಯಬೇಕಿದೆ ಎಂದು ಅವರು ಹೇಳಿದರು.
ಪ್ರತಿಭಟನೆಯಲ್ಲಿ ಪುರಸಭಾ ಸದಸ್ಯ ಉಮೇಶ್ ಪೂಜಾರಿ ಮಲ್ಲಾರ್, ಭರತ್ ಶೆಟ್ಟಿ, ಜಯರಾಮ ಆಚಾರ್ಯ, ಸುಧಾಕರ ಶೆಟ್ಟಿ ಹೆಜಮಾಡಿ,ಇಕ್ಬಾಲ್ ಆತ್ರಾಡಿ, ವೆಂಕಟೇಶ ಪಡುಬಿದ್ರಿ, ಇಸ್ಮಾಯಿಲ್ ಕರ್ನಿರೆ ,ಹುಸೇನ್ ಹೈಕಾಡಿ,ಮೊದಲಾದವರು ಉಪಸ್ಥಿತರಿದ್ದರು.
ದ.ಕ.ದಲ್ಲಿ ಸೆ. 26ರಿಂದ ಅ.10ರ ವರೆಗೆ ದಸರಾ ರಜೆ – ಉಡುಪಿಯಲ್ಲಿ ಅ.3ರಿಂದ 16ರ ವರೆಗೆ ರಜೆ – Vishwanews24
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…