ಉಡುಪಿ : ಕಾಪುವಿನ ಮಲ್ಲಾರ್ ಫಕೀರ್ನಕಟ್ಟೆ ಗುಜರಿ ಅಂಗಡಿಯಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಜಾಕ್ ಮಲ್ಲಾರ್, ನಿಯಾಜ್ ಹಾಗೂ ಅಂಗಡಿಯ ಪಾಲುದಾರರಾದ ಚಂದ್ರನಗರದ ರಜಬ್ ಮೃತಪಟ್ಟ ದುರ್ದೈವಿಗಳಾಗಿದ್ದಾರೆ.
ಇನ್ನೋರ್ವ ಪಾಲುದಾರ ಹಸನಬ್ಬ ಸೇರಿದಂತೆ ಇಬ್ಬರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಗಡಿಯಲ್ಲಿ ಗುಜರಿಗೆ ಬಂದಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಉಡುಪಿ ಅಗ್ನಿಶಾಮಕದಳ ಹಾಗೂ ISPRL ಅಗ್ನಿಶಾಮಕ ದಳದ ಸತತ ಕಾರ್ಯಾಚರಣೆಯಿಂದಾಗಿ ಬೆಂಕಿ ನಿಯಂತ್ರಣಕ್ಕೆ ಬಂದಿದೆ. ಬೆಂಕಿಯನ್ನು ಸಂಪೂರ್ಣ ಶಮನಗೊಳಿಸಲಾಗಿದೆ.
ಸ್ಪೋಟದಿಂದಾಗಿ ಅಕ್ಕಪಕ್ಕದ ಮನೆಗಳಿಗೆ ಬೆಂಕಿ ಹಬ್ಬುವುದನ್ನು ತಡೆಯುವಲ್ಲಿ ಅಗ್ನಿಶಾಮಕದಳ ಹಾಗೂ ಸಾರ್ವಜನಿಕರ ನೆರವಿನೊಂದಿಗೆ ಯಶಸ್ವಿಯಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…