Featured

ಕಾಪು : ಬಹು ನಿರೀಕ್ಷಿತ ಮಿನಿ ವಿಧಾನಸೌಧ  ಫೆಬ್ರವರಿಯಲ್ಲಿ ಲೋಕಾರ್ಪಣೆ – Vishwanews24

ಕಾಪು : ಬಹು ನಿರೀಕ್ಷಿತ ಮಿನಿ ವಿಧಾನಸೌಧ  ಫೆಬ್ರವರಿಯಲ್ಲಿ ಲೋಕಾರ್ಪಣೆ

ಕಾಪು: 2016ಕ್ಕೆ ಘೋಷಣೆಯಾಗಿ, 2018ರಲ್ಲಿ ಅಸ್ತಿತ್ವಕ್ಕೆ ಬಂದಿರುವ ನೂತನ ಕಾಪು ತಾಲೂಕಿನ ಬಹು ನಿರೀಕ್ಷಿತ ಮಿನಿ ವಿಧಾನಸೌಧ ಕಟ್ಟಡ ಕಾಮಗಾರಿ ಭರದಿಂದ ಸಾಗುತ್ತಿದೆ. ನಿರೀಕ್ಷಿತ ರೀತಿಯಲ್ಲಿ ಕಾಮಗಾರಿ ಪೂರ್ಣಗೊಂಡರೆ ಮುಂದಿನ ತಿಂಗಳಿನಿಂದ ಜನತೆಗೆ ಒಂದೇ ಸೂರಿನಡಿಯಲ್ಲಿ ತಾಲೂಕು ಆಡಳಿತದ ಸೇವೆಗಳು ಲಭ್ಯವಾಗಲಿವೆ.

ಕಾಪು ಪಡುಗ್ರಾಮ ಬಂಗ್ಲೆ ಮೈದಾನದ 3.42 ಎಕರೆ ಜಮೀನಿನಲ್ಲಿ ನೆಲಮಹಡಿ ಮತ್ತು ಮೊದಲ ಮಹಡಿಯಲ್ಲಿ ಒಟ್ಟು 2,857 ಚ. ಮೀ. ವಿಸ್ತಿರ್ಣದ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. 10 ಕೋಟಿ ರೂ. ಯೋಜನಾ ವೆಚ್ಚವಾಗಿದ್ದು 8.64 ಕೋಟಿ ರೂ. ವೆಚ್ಚದಲ್ಲಿ ಗುತ್ತಿಗೆದಾರರಿಗೆ ಕಾಮಗಾರಿ ವಹಿಸಿಕೊಡಲಾಗಿದೆ.

ವಿವಿಧ ಕಚೇರಿಗಳು
ಕಾಪು ತಾಲೂಕಿನಲ್ಲಿ ಪ್ರಸ್ತುತ ಪುರಸಭೆ, ಪೊಲೀಸ್‌, ಕಂದಾಯ, ಚುನಾವಣೆ, ಗ್ರಾಮೀಣಾಭಿವೃದ್ಧಿ ಇಲಾಖೆ, ತಾ.ಪಂ., ಅರಣ್ಯ, ಆರೋಗ್ಯ, ಕೃಷಿ ಇಲಾಖೆ ಮತ್ತು ಉಪ ಖಜಾನೆ ಕಾರ್ಯಾಚರಿಸುತ್ತಿದ್ದು ಶಾಸಕರ ಕಚೇರಿ, ತಹಶೀಲ್ದಾರ್‌ ಕಚೇರಿ, ಸರ್ವೇ ಇಲಾಖೆ, ಉಪನೋಂದಣಿ ಕಚೇರಿ, ಭೂಮಿ, ತಾಲೂಕು ದಂಡಾಧಿಕಾರಿ ನ್ಯಾಯಾಲಯ ಸಹಿತ ಸುಮಾರು 30 ಇಲಾಖೆಗಳ ಕಚೇರಿಗಳು ಮಿನಿ ವಿಧಾನಸೌಧದ ಸಂಕೀರ್ಣದೊಳಗೆ ಬರಲಿವೆ. ಮಿನಿ ವಿಧಾನಸೌಧ ಕಟ್ಟಡದಲ್ಲಿ 8 ಜನ ಸಾಮರ್ಥಯದ ಲಿಫ್ಟ್‌, 25 ಸಾವಿರ ಲೀಟರ್‌ ಸಾಮರ್ಥಯದ ಸಂಪ್‌ ಟ್ಯಾಂಕ್‌, ಡಿಸೇಲ್‌ ಜನರೇಟರ್‌, ಕಾರಿಡಾರ್‌, ವಿವಿಧ ಕಚೇರಿಗಳು, ಕೋರ್ಟ್‌ ಹಾಲ್‌, ಮೀಟಿಂಗ್‌ ಹಾಲ್‌ ಹಾಗೂ ಆಕರ್ಷಕ ವಿನ್ಯಾಸಗಳು ಕಟ್ಟಡದ ಸೊಬಗು ಹೆಚ್ಚಿಸಿವೆ.

ರೆಕಾರ್ಡ್‌ ರೂಂ, ಶಿಕ್ಷಣ, ಲೋಕೋಪಯೋಗಿ, ಜಿ.ಪಂ. ಇಂಜಿನಿಯರಿಂಗ್‌, ತೋಟಗಾರಿಕೆ, ಸಮಾಜಕಲ್ಯಾಣ, ಶಿಶು ಅಭಿವೃದ್ಧಿ, ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ, ರೇಷ್ಮೆ ಇಲಾಖೆ, ಬಂದರು ಮತ್ತು ಮೀನುಗಾರಿಕೆ, ಯುವಜನ ಮತ್ತು ಕ್ರೀಡಾ ಇಲಾಖೆ, ವಕ್‌³ ಬೋರ್ಡ್‌, ಧಾರ್ಮಿಕ ದತ್ತಿ ಇಲಾಖೆ, ಸಮಗ್ರ ಗಿರಿಜನ ಅಭಿವೃದ್ಧಿ ನಿಗಮ, ಆರ್‌ಟಿಒ ಕಚೇರಿ ಹಾಗೂ ಲೀಡ್‌ ಬ್ಯಾಂಕ್‌ ಶಾಖೆಗಳ ತಾಲೂಕು ಮಟ್ಟದ ಕಚೇರಿಗಳು ಇನ್ನಷ್ಟೇ ಕಾಪುವಿಗೆ ಬರಬೇಕಿದ್ದು ಮಿನಿ ವಿಧಾನಸೌಧ ಉದ್ಘಾಟನೆಗೊಳ್ಳುವಾಗಲೇ ತಾಲೂಕಿಗೆ ಸಂಬಂಧಪಟ್ಟ ಎಲ್ಲ ಇಲಾಖೆಗಳೂ ಕಾಪುವಿಗೆ ಬರುವಂತಾದರೆ ಉತ್ತಮ ಎನ್ನುವುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ಖಾಲಿ ಹುದ್ದೆಗಳ ಭರ್ತಿಯಾಗಲಿ
ಕಾಪು ತಾಲೂಕಿನ 30 ಕಂದಾಯ ಗ್ರಾಮಗಳಲ್ಲಿ 23 ಗ್ರಾಮ ಕರಣಿಕ ಹುದ್ದೆಗಳಿದ್ದು ಇದಲ್ಲಿ ಈಗಾಗಲೇ 20 ಮಂದಿ ಕರ್ತವ್ಯದಲ್ಲಿದ್ದಾರೆ. 3 ಹುದ್ದೆಗಳು ಖಾಲಿಯಿವೆ. ಪ್ರಥಮ ದರ್ಜೆ ಸಹಾಯಕ ಮೂರು ಮಂದಿ ಕರ್ತವ್ಯ ನಿರ್ವಹಿಸುತ್ತಿದ್ದು ದ್ವಿತೀಯ ದರ್ಜೆ ಸಹಾಯಕರ 4 ಹುದ್ದೆಗಳಲ್ಲಿ 3 ಹುದ್ದೆಗಳು ಖಾಲಿಯಿವೆ. ಆಹಾರ ನಿರೀಕ್ಷರ ಹುದ್ದೆ, ಗುಮಾಸ್ತ 3 ಹುದ್ದೆಗಳಲ್ಲಿ 2 ಇನ್ನಷ್ಟೇ ತುಂಬಬೇಕಿದೆ. ಜಿ – 2 ಒಂದು ಹುದ್ದೆ ಮಂಜೂರಾಗಿದ್ದರೂ ಅದು ಕೂಡಾ ಇನ್ನೂ ಭರ್ತಿಯಾಗಿಲ್ಲ. ಶೀಘ್ರವಾಗಿ ಈ ಖಾಲಿ ಹುದ್ದೆಗಳ ಭರ್ತಿಗೆ ಸರಕಾರ ಮತ್ತು ಜನಪ್ರತಿನಿಧಿಗಳು ಕ್ರಮವಹಿಸಬೇಕಿದೆ.

ಹೋಬಳಿ, ನಾಡ ಕಚೇರಿಯ ನಿರೀಕ್ಷೆ
ಉಡುಪಿ ತಾಲೂಕಿನಿಂದ ಬೇರ್ಪಡುವವರೆಗೂ ಕಾಪು ಹೋಬಳಿ ಕೇಂದ್ರವಾಗಿತ್ತು. ಈಗ ಕಾಪು ತಾಲೂಕು ಕೇಂದ್ರವಾಗಿ ರಚನೆಯಾಗಿರುವುದರಿಂದ ಅದಕ್ಕೆ ಅನುಕೂಲಕರವಾಗಿ ನೂತನ ಹೋಬಳಿ ಕೇಂದ್ರ ಅಸ್ತಿತ್ವಕ್ಕೆ ಬರಬೇಕಿದೆ. ಪಡುಬಿದ್ರಿ ಮತ್ತು ಶಿರ್ವ ಭಾಗದಲ್ಲಿ ಹೋಬಳಿ ಕೇಂದ್ರ ಅಥವಾ ನಾಡಕಚೇರಿ ಆರಂಭಗೊಂಡಲ್ಲಿ ಜನರಿಗೆ ಬಹಳಷ್ಟು ಅನುಕೂಲಕರವಾಗಲಿದೆ. ತಾಲೂಕು ರಚನೆಗೊಂಡ ಐದಾರು ವರ್ಷಗಳ ಬಳಿಕ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಸಬ್‌ ರಿಜಿಸ್ಟ್ರಾರ್‌ ಕಚೇರಿ ಮಂಜೂರಾಗಿದ್ದು ಅದು ಕೂಡಾ ಶೀಘ್ರ ಕಾರ್ಯಾಚರಿಸಿದರೆ ತಾಲೂಕಿನ 30 ಕಂದಾಯ ಗ್ರಾಮಗಳ ಜನತೆಗೆ ಅನುಕೂಲಕರವಾಗಲಿದೆ.

ಫೆಬ್ರವರಿಯಲ್ಲಿ ಲೋಕಾರ್ಪಣೆ
ಕಾಪು ತಾಲೂಕು ಮಿನಿ ವಿಧಾನಸೌಧದ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದ್ದು ಮುಂದಿನ ಫೆಬ್ರವರಿ ತಿಂಗಳಲ್ಲಿ ಲೋಕಾರ್ಪಣೆಗೊಳ್ಳಲಿದೆ. ಕಂದಾಯ ಸಚಿವ ಆರ್‌. ಆಶೋಕ್‌ ಅವರ ಸಮಯ ನೋಡಿ ಉದ್ಘಾಟನೆಗೆ ದಿನ ನಿಗದಿ ಪಡಿಸಲಾಗುವುದು. ಗುಣಮಟ್ಟದ ಕಾಮಗಾರಿ ನಡೆಸಿದ್ದು ಕಟ್ಟಡ ಲೋಕಾರ್ಪಣೆ ಬಳಿಕ ಸಾರ್ವಜನಿಕರಿಗೆ ಎಲ್ಲ ಸೇವೆಯೂ ಒಂದೇ ಕಡೆ ದೊರೆಯಲಿದೆ. ಆ ಮೂಲಕ ಕಾಪು ತಾಲೂಕಿನ ಜನತೆಯ ಬಹುಕಾಲದ ನನಸು ನನಸಾಗಲಿದೆ.
– ಲಾಲಾಜಿ ಆರ್‌. ಮೆಂಡನ್‌, ಶಾಸಕರು, ಕಾಪು

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

21 minutes ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 hour ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

3 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

3 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

4 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

4 hours ago