ಕಾಪು: ನಾಮ ಪತ್ರ ಸಲ್ಲಿಕೆಗೂ ಮುನ್ನ ಕಾಪು ಬಿಜೆಪಿ ಅಭ್ಯರ್ಥಿ ಕಾಪು ಮಾಜಿ ಶಾಸಕ ಲಾಲಜಿ ಆರ್ ಮೆಂಡನ್ ಕಾಪು ಲಕ್ಷ್ಮೀ ಜನಾರ್ದನ ದೇವಸ್ಥಾನ,ಹಾಗೂ ಕಾಪುವಿನ ಮೂರು ಮಾರಿಗುಡಿ ಮತ್ತು ಕಟಪಾಡಿ ಶ್ರೀ ವಿಶ್ವನಾಥನ ಸನ್ನಿಧಿಯಲ್ಲಿ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು.
ತದನಂತರ ಮಾಧ್ಯಮದವರೊಂದಿಗೆ ಮಾತನಾಡಿ” ರಾಜ್ಯದಲ್ಲಿ ಕಾಂಗ್ರೆಸ್ ಸಂಪೂರ್ಣ ಹದಗೆಟ್ಟು ಹೋಗಿದೆ, ಕಾಪುವಿನ ಶಾಸಕ ವಿನಯ್ ಕುಮಾರ್ ಸೊರಕೆ ಬಂಡವಾಳ ಶಾಹಿಗಳ ಪರ ಧ್ವನಿ ಎತ್ತುತ್ತಿದ್ದಾರೇ ಹೊರತು ಬಡವರ ಬಗ್ಗೆ ಒಂದಿಷ್ಟು ಕಾಳಜಿ ಇಲ್ಲದಂತಾಗಿದೆ. ಸೊರಕೆ ಸೂಟು ಬೂಟಿನ ನಾಟಕದ ರಾಜಕೀಯದಲ್ಲಿ ತೊಡಗಿದ್ದಾರೆ, ಶಾಶ್ವತ ಕುಡಿಯುವ ನೀರಿನ ಯೋಜನೆ ಕನಸಾಗಿಯೇ ಉಳಿದಿದೆ,ಪುರಸಭೆ ನಗರಾಭಿವೃದ್ದಿ ಪ್ರಾಧಿಕಾರದಿಂದ ಜನರಿಗೆ ಒಂದು ಪೈಸೆಯ ಲಾಭವಾಗದಿದ್ದರೂ ಅವರ ಚೇಳಗಳನ್ನು ಸಮಾಧಾನ ಪಡಿಸುವ ಉದ್ದೇಶವಾಗಿದೆ.” ಮತ್ತು ಗುರ್ಮೆ ಸುರೇಶ್ ಶೆಟ್ಟಿ ಪ್ರಚಾರಕ್ಕೆ ಬರುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು “ಗುರ್ಮೆಯವರನ್ನು ದೂರವಾಣಿ ಮೂಲಕ ಸಂಪರ್ಕಿಸಿದ್ದೇನೆ ಮತ್ತು ಅವರು ನಮ್ಮ ಪಕ್ಷದ ನಾಯಕರು,ಮುಂದಿನ ದಿನದಲ್ಲಿ ಅವರಿಗೂ ಪಕ್ಷ ಉನ್ನತ ಸ್ಥಾನಮಾನ ನೀಡುವುದರಲ್ಲಿ ಯಾವುದೆ ಅನುಮಾನವಿಲ್ಲ ಮತ್ತು ಪ್ರಚಾರ ಕಾರ್ಯದಲ್ಲಿ ಅವರು ಸಕ್ರೀಯರಾಗಿ ಭಾಗವಹಿಸುವ ನಿರೀಕ್ಷೆಯಿದೆ, ಯಾವುದೇ ಗೊಂದಲ ಇಲ್ಲ ಎಂದರು. ತದನಂತರ ಸಾವಿರಾರು ಕಾರ್ಯ ಕರ್ತರ ಜತೆಗೂಡಿ ಕಾಪು ಬಿಜೆಪಿ ಕಛೇರಿಯಿಂದ ಹೊರಟು ಉಡುಪಿಯಲ್ಲಿ ನಾಮಪತ್ರ ಸಲ್ಲಿಸಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…