ಕಾಪು ಬಿಜೆಪಿ ಕಚೇರಿಯಲ್ಲಿ ವಾಜಪೇಯಿ ನಿಧನಕ್ಕೆ ಸಂತಾಪ ಸಭೆ
ಕಾಪು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನಕ್ಕೆ ಕಾಪು ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸಂಜೆ ಸಂತಾಪ ಸೂಚನಾ ಸಭೆ ನಡೆಯಿತು.
ಶಾಸಕ ಲಾಲಾಜಿ ಮೆಂಡನ್ ಮಾತನಾಡಿ, ಆಟಲ್‍ಜಿ ಅಜಾತಶತ್ರುವಾಗಿದ್ದು, ಎಲ್ಲಾ ಪಕ್ಷದವರೊಂದಿಗೂ ನಿಕಟ ಬಾಂಧವ್ಯ ಹೊಂದಿದ್ದರು. ಬಿಜೆಪಿಯೇತರ ಸರ್ಕಾರ ಕೇಂದ್ರದಲ್ಲಿದ್ದಾಗ ಪಕ್ಷ ಬೇಧ ಮರೆತು ಅಭಿವೃದ್ಧಿಗೆ ಶ್ರಮಿಸಿದ್ದರು. ಓರ್ವ ದೇಶ ಕಂಡ ಧೀಮಂತ ನಾಯಕರಾಗಿದ ಅಟ್ಟಲ್‍ಜಿ ಅವರು, ದೇಶದ ಒಳಿತಿಗಾಗಿ ಹಗಲಿರುಳು ದುಡಿದಿದ್ದರು. ಕಾಪುವಿಗೂ ಅವರಿಗೂ ಅವಿನಾಭಾವ ಸಂಬಂಧವಿತ್ತು ಎಂದ ಅವರು ಇಂತಹ ನಾಯಕನನ್ನು ಕಳೆದು ನಮ್ಮ ಶಕ್ತಿಯನ್ನು ಕೊಂಡಂತೆ ಎಂದು ದುಖಃ ವ್ಯಕ್ತಪಡಿಸಿದರು.
ಕಾಪು ಕ್ಷೇತ್ರ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಪಂಚಾಯ್ತಿ ಸದಸ್ಯೆ ಗೀತಾಂಜಲಿ ಸುವರ್ಣ, ಕುತ್ಯಾರು ನವೀನ್ ಶೆಟ್ಟಿ, ಶಂಕರ ಪೂಜಾರಿ ಕಟಪಾಡಿ ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…