ಕಾಪು : ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದಲೂ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ : ವಿನಯಕುಮಾರ ಸೊರಕೆ -Vishwanews24

ಕಾಪು: ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದಲೂ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಮಾಜಿ ಸಚಿವ ವಿನಯಕುಮಾರ ಸೊರಕೆ ಹೇಳಿದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಸಮಿತಿ ಮತ್ತು ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ಜಂಟಿ ಆಶ್ರಯದಲ್ಲಿ ಅಡುಗೆ ಅನಿಲ ಬೆಲೆಯೇರಿಕೆ ನೀತಿಯನ್ನು ಖಂಡಿಸಿ ಗುರುವಾರ ಸಂಜೆ ಕಾಪು ಪೇಟೆಯಲ್ಲಿ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.

ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನದ ವಿರುದ್ಧ ಜನ ಸಾಮಾನ್ಯರಲ್ಲಿ ಜಾಗೃತಿ ಮೂಡಿಸಿ, ಹೋರಾಟ ನಡೆಸುವ ನಿಟ್ಟಿನಲ್ಲಿ ಮಹಿಳಾ ಕಾಂಗ್ರೆಸ್ ವತಿಯಿಂದ ಬ್ಲಾಕ್ ಮಟ್ಟದಿಂದ ಬೂತ್ ಮಟ್ಟದವರೆಗು ವಿವಿಧ ಹಂತದ ಪ್ರತಿಭಟನೆಗಳು ನಡೆಯಲಿವೆ ಎಂದರು.

ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್‍ ಚಂದ್ರ ಸುವರ್ಣ, ಪಕ್ಷದ ಮುಖಂಡರಾದ ಸರಸು ಡಿ. ಬಂಗೇರ, ಫರ್ಜಾನಾ ಸಂಜಯ್, ಪ್ರೆಸಿಲ್ಲಾ ಡಿ. ಸೋಜ, ಸುಲೋಚನಾ ಬಂಗೇರ, ಜ್ಯೋತಿ ಹೆಬ್ಬಾರ್, ರೋಶನಿ ಒಲಿವೆರೋ, ಚಂದ್ರಿಕಾ ಶೆಟ್ಟಿ, ಪುಟ್ಟಮ್ಮ ಶ್ರೀಯಾನ್, ಜ್ಯೂಲಿಯಟ್ ವೀರಾ ಡಿ. ಸೋಜ, ಗೋಪಾಲ್ ಪೂಜಾರಿ, ವೈ. ಗಂಗಾಧರ ಸುವರ್ಣ, ಸುನೀಲ್ ಬಂಗೇರ, ದೀಪಕ್ ಕುಮಾರ್ ಎರ್ಮಾಳ್, ದಿನೇಶ್ ಕೋಟ್ಯಾನ್ ಪಲಿಮಾರು, ನವೀನ್ ಎನ್. ಶೆಟ್ಟಿ, ಶ್ರೀಕರ ಅಂಚನ್, ಶಾಬು ಸಾಹೇಬ್, ಮಹಮ್ಮದ ಫಾರೂಕ್ ಚಂದ್ರನಗರ, ವಿವಿಧ ಜನಪ್ರತಿನಿ„ಗಳು, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಲೆ ಸ್ವಾಗತಿಸಿ, ಪ್ರಸ್ತಾವನೆ ಗೈದರು. ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪ್ರಭಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

9 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago