Featured

ಕಾಪು ಬೀಚ್‌ನಲ್ಲಿ ನಾಪತ್ತೆಯಾಗಿದ್ದ ಇಬ್ಬರು ಹುಡುಗರ ಮೃತದೇಹ ಪತ್ತೆ -vishwanews24

ಕಾಪು ಬೀಚ್‌ನಲ್ಲಿ ಸಮುದ್ರದ ಬೃಹತ್ ಅಲೆಗಳ ಹೊಡೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಇಬ್ಬರು ಹುಡುಗರ ಮೃತದೇಹ ಪತ್ತೆ..

ಉಡುಪಿ: ಕಾಪು ಬೀಚ್‌ನಲ್ಲಿ ಸಮುದ್ರದ ಬೃಹತ್ ಅಲೆಗಳ ಹೊಡೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಇಬ್ಬರು ಹುಡುಗರ ಮೃತದೇಹ ಪತ್ತೆಯಾಗಿದೆ.

ಮೃತರನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾವಿನಕೊಪ್ಪ ನಿವಾಸಿ ಅಲ್ತಾಫ್ ಅವರ ಪುತ್ರ ಸಮೀರ್ (20) ಹಾಗೂ ದಾವಣಗೆರೆಯ ಅಹಮ್ಮದಿ ನಗರದ ನಿವಾಸಿ ಝಿಯಾವುಲ್ಲಾ ಅವರ ಪುತ್ರ ಮಲ್ಲಿಕ್ ರಿಹಾನ್ (15) ಎಂದು ಗುರುತಿಸಲಾಗಿದೆ.

ಭಾನುವಾರ ದಾವಣಗೆರೆಯಿಂದ 12 ಮಂದಿ ಪ್ರವಾಸಕ್ಕೆಂದು ಕಾಪು ಬೀಚ್‌ಗೆ ಆಗಮಿಸಿದ್ದರು. ಈ ಪೈಕಿ ಐವರು ಸಮುದ್ರದಲ್ಲಿ ಈಜಲೆಂದು ನೀರಿಗೆ ಇಳಿದಿದ್ದರು. ಈ  ವೇಳೆ ಸಮುದ್ರದಲ್ಲಿ ಏಕಾಏಕಿ ಅಪ್ಪಳಿಸಿದ ಬೃಹತ್ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ಕೊಚ್ಚಿಕೊಂಡು ಹೋಗಿದ್ದರು. ಘಟನೆ ಗಮನಿಸಿದ ತಕ್ಷಣ ಕಾರ್ಯಪ್ರವೃತ್ತರಾದ ಜೀವರಕ್ಷಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಓರ್ವನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದರು. ಉಳಿದ ಇಬ್ಬರು ಸಮುದ್ರದಲ್ಲಿ ನಾಪತ್ತೆಯಾಗಿದ್ದರು.

ನಾಪತ್ತೆಯಾದವರಿಗಾಗಿ ಭಾನುವಾರದಿಂದಲೇ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಈ ವೇಳೆ ಸೋಮವಾರ ಬೆಳಗ್ಗೆ ಇಬ್ಬರ ಮೃತದೇಹಗಳು ಪತ್ತೆಯಾಗಿದ್ದು, ಘಟನೆಯಿಂದ ಪ್ರವಾಸಕ್ಕೆ ಬಂದಿದ್ದ ಕುಟುಂಬಸ್ಥರಲ್ಲಿ ಶೋಕ ಆವರಿಸಿದೆ.

Vishwa News 24

Recent Posts

ಕಾಪುವಿನಲ್ಲಿ ನ.27ರಂದು ಬೃಹತ್ ಉಚಿತ ಉದ್ಯೋಗ ಮೇಳ -vishwanews24

ಕಾಪುವಿನಲ್ಲಿ ನ.27ರಂದು ಬೃಹತ್ ಉಚಿತ ಉದ್ಯೋಗ ಮೇಳ ವಿದೇಶಿ ಕಂಪೆನಿ ಸೇರಿದಂತೆ ಹತ್ತಾರು ಸಂಸ್ಥೆಗಳ ಭಾಗಹಿಸುವಿಕೆ ಕಾಪು: ಯುವಜನತೆಗೆ ಉದ್ಯೋಗಾವಕಾಶ…

21 hours ago

ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ -vishwanews24

ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ ನವದೆಹಲಿ: ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪದಾಧಿಕಾರಿಗಳನ್ನು…

3 days ago

ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ – vishwanews24

ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ ಇತಿಹಾಸ ಪ್ರಸಿದ್ಧ ಕಾಪು ಹಳೆ…

5 days ago

ಸಂಬಂಧಿಕರನ್ನು ಬೀಳ್ಕೊಡಲು ಬಂದ 12 ಮಂದಿ ವಂದೇ ಭಾರತ್‌ ರೈಲಲ್ಲಿ ಲಾಕ್‌ ; 36 ಸಾವಿರ ದಂಡ – vishwanews24

ಸಂಬಂಧಿಕರನ್ನು ಬೀಳ್ಕೊಡಲು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರವೇಶಿಸಿದ 12 ಮಂದಿ ಸ್ವಯಂಚಾಲಿತ ಬಾಗಿಲುಗಳು ಮುಚ್ಚಿದ್ದರಿಂದ ರೈಲಿನೊಳಗೆ ಲಾಕ್ 140 ಕಿ.ಮೀ…

5 days ago

ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹ 20ರವರೆಗೆ ಕಡಿತ – vishwanews24

ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹20ರವರೆಗೆ ಕಡಿತ ಬೆಂಗಳೂರು: ಮಾರುಕಟ್ಟೆಯಲ್ಲಿ ಹೊಸ…

5 days ago

ನವೆಂಬರ್ 30ರವರೆಗೆ ಸೌದಿಗೆ ಇಂಡಿಗೋ ವಿಮಾನ ಹಾರಾಟ ರದ್ದು -vishwanews24

ನವೆಂಬರ್ 30ರವರೆಗೆ ಸೌದಿಗೆ ಇಂಡಿಗೋ ವಿಮಾನ ಹಾರಾಟ ರದ್ದು ನವದೆಹಲಿ: ಸೌದಿ ಅರೇಬಿಯಾದಲ್ಲಿನ ಪ್ರಸ್ತುತ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಇಂಡಿಗೋ…

5 days ago