ಕಾಪು : ಬೆಳಪು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಐಕಳಬಾವ ಡಾ| ದೇವಿಪ್ರಸಾದ್‌ ಶೆಟ್ಟಿ ಅವಿರೋಧ ಆಯ್ಕೆ – vishwanews24

Featured, ಉಡುಪಿ

ಕಾಪು : ಬೆಳಪು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಐಕಳಬಾವ ಡಾ| ದೇವಿಪ್ರಸಾದ್‌ ಶೆಟ್ಟಿ ಅವಿರೋಧ ಆಯ್ಕೆ

ಕಾಪು: ಬೆಳಪು ಹಾಲು ಉತ್ಪಾದಕರ ಸಹಕಾರ ಸಂಘ ನಿ. ಪಣಿಯೂರು ನೂತನ ಅಧ್ಯಕ್ಷರಾಗಿ ಐಕಳಬಾವ ಡಾ| ದೇವಿಪ್ರಸಾದ್‌ ಶೆಟ್ಟಿ ಅವಿರೋಧ ಆಯ್ಕೆಯಾಗಿದ್ದಾರೆ.

ಬೆಳಪು ಗ್ರಾ.ಪಂ.ನ ಅಧ್ಯಕ್ಷರಾಗಿ ದಾಖಲೆಯ 10ನೇ ಬಾರಿಗೆ ಚುನಾಯಿತರಾಗಿರುವ ಅವರು ಬೆಳಪು ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷರಾಗಿ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕರಾಗಿ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ, ಉಡುಪಿ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ನಿಯಮಿತ, ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ನಿರ್ದೇಶಕರಾಗಿ, ದ.ಕ. ಉಡುಪಿ ಮತ್ತು ಕಾಸರಗೋಡು ಜಿಲ್ಲಾ ಕಂಬಳ ಸಮಿತಿ ಮತ್ತು ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

Budget 2024 : ಪಿಎಂ ಸೂರ್ಯೋದಯ ಯೋಜನೆಗೆ ವಿಶೇಷ ಒತ್ತು ; ಒಂದು ಕೋಟಿ ಮನೆಗಳಿಗೆ ಸೋಲಾರ್ ಮೇಲ್ಛಾವಣಿ : ನಿರ್ಮಲಾ ಸೀತಾರಾಮನ್ – vishwanews24

ದೇವಿಪ್ರಸಾದ್‌ ಅವರು ಸತತ 2 ವರ್ಷಗಳಿಂದ ಬೆಳಪು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನಿರಂತರ ದಿನವಹಿ 100 ಲೀಟರ್‌ ಹಾಲು ಪೂರೈಸುವ ಮೂಲಕ ಸಂಘಕ್ಕೆ ಅತೀ ಹೆಚ್ಚು ಹಾಲು ಪೂರೈಸಿದ ಸಾಧಕರೆಂಬ ಹೆಗ್ಗಳಿಕೆಗೂ ಭಾಜನರಾಗಿದ್ದಾರೆ

Leave a Reply