ಕಾಪು : ರಾಷ್ಟ್ರೀಯ ಹೆದ್ದಾರಿ 66 ರ ಕಾಪು ಕೆ 1 ಹೊಟೇಲ್ ಜಂಕ್ಷನ್ ಬಳಿ ಬೈಕ್ ಗೆ ಕಾರು ಢಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.
ಬೈಕ್ ಸವಾರ ಕಡಿಯಾಳಿ ನಿವಾಸಿ ಸುರೇಶ್ ತೀವ್ರ ಗಾಯಗೊಂಡಿದ್ದು ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.ಉಡುಪಿಯಿಂದ ಕಾಪು ಕಡೆಗೆ ಬರುತ್ತಿದ್ದ ಬೈಕ್ ಗೆ , ಅದೇ ದಿಕ್ಕಿನಲ್ಲಿ ಬರುತ್ತಿದ್ದ ಕೇರಳ ನೋಂದಾವಣೆಯ ಕಾರು ಢಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.
ತೀವ್ರ ಗಾಯಗೊಂಡ ಗಾಯಾಳುವನ್ನು ಆಪದ್ಭಾಂಧವ ಸೂರಿ ಶೆಟ್ಟಿ ನೇತೃತ್ವದಲ್ಲಿ ಅಂಬುಲೆನ್ಸ್ ಚಾಲಕ ನಾಗರಾಜ್ ಕಾಪು ಸಹಕಾರದೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ಸಂದರ್ಭ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದ್ದು ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…