ಪಡುಬಿದ್ರಿ : ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಸಾವು -Vishwanews24
ಪಡುಬಿದ್ರಿ : ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಸಾವು -Vishwanews24
ಪಡುಬಿದ್ರಿ: ಎರ್ಮಾಳು ದೇವಸ್ಥಾನದ ಎದುರು ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಅವರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ರವಿವಾರ ರಾತ್ರಿ ನಡೆದಿದೆ.
ಅದಮಾರಿನ 52 ವರ್ಷ ವಯಸ್ಸಿನ ವಸಂತ ದೇವಾಡಿಗ ಮೃತರು ಎಂದು ಗುರುತಿಸಲಾಗಿದೆ. ಅವರು ರವಿವಾರ ರಾತ್ರಿ ಎರ್ಮಾಳು ಜನಾರ್ಧನ ದೇವಸ್ಥಾನದ ಎದುರು ನಡೆದು ಕೊಂಡು ಹೋಗುತ್ತಿದ್ದಾಗ, ಹಿಂಬದಿಯಿಂದ ಬಂದ ಬೈಕ್ ಢಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡ ಅವರನ್ನು ಉಡುಪಿ ಅಜ್ಜರ ಕಾಡು ಆಸ್ಪತ್ರೆಗೆ ಸಾಗಿಸಲಾಯಿತು. ಆದರೂ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು: ನಗರದಲ್ಲಿ ಹೆದ್ದಾರಿ ದರೋಡೆಗೆ ಸಂಚು ರೂಪಿಸುತ್ತಿದ್ದ 8 ಮಂದಿ ಆರೋಪಿಗಳು ಪೊಲೀಸರ ವಶಕ್ಕೆ -Vishwanews24
