Featured

ಕಾಪು ಬ್ರಹ್ಮಕಲಶೋತ್ಸವ :ಇದರಿಂದ ನಾಡಿಗೆ ಮಂಗಳ ಉಂಟಾಗಲಿದೆ : ಎಡನೀರು ಶ್ರೀ – vishwanews24

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಾಲ್ಕನೇ ದಿನ..

ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಎಡನೀರು ಸ್ವಾಮೀಜಿ ಆಶೀರ್ವಚನ

ಸಮಸ್ತ ಹಿಂದೂ ಸಮಾಜವನ್ನು ಜಾಗೃತಗೊಳಿಸುವಲ್ಲಿ ಕಾಪು ಮಾರಿಗುಡಿಯು ಮಹತ್ವದ ಪಾತ್ರ ನಿರ್ವಹಿಸುತ್ತಿದೆ : ಕೇಮಾರು ಶ್ರೀ

ಕಾಪು: ಇಲ್ಲಿನ ಹೊಸ ಮಾರಿಗುಡಿಯು ದಕ್ಷಿಣ ಭಾರತದಲ್ಲೇ ಅತ್ಯಪೂರ್ವವೆಂಬಂತೆ ಅದ್ಭುತವಾಗಿ ನಿರ್ಮಾಣಗೊಂಡಿದೆ. ಭಕ್ತರ ಶಿಲಾಸೇವೆ ಸಹಿತ ವಿವಿಧ ಸೇವಾ ಕಾರ್ಯಗಳ ಮೂಲಕವಾಗಿ ಹೊಸತನಗಳೊಂದಿಗೆ ನಿರ್ಮಾಣ ಗೊಂಡಿರುವ ಮಾರಿಗುಡಿಯಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದಲ್ಲೂ ವೈಶಿಷ್ಟ್ಯಗಳಿದ್ದು, ಇದರಿಂದ ನಾಡಿಗೆ ಮಂಗಳ ಉಂಟಾಗಲಿದೆ ಎಂದು ಶ್ರೀ ಎಡನೀರು ಜಗದ್ಗುರು ಶಂಕರಾಚಾರ್ಯ ಸಂಸ್ಥಾನಂ ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹೇಳಿದರು.

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ಹಮ್ಮಿಕೊಂಡಿ ರುವ ನಾಲ್ಕನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.

ಮಾರಿಗುಡಿಯಿಂದ ಸಮಾಜ ಜಾಗೃತಿ ಕಾರ್ಯ: ಕೇಮಾರು ಶ್ರೀ ಶ್ರೀ ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಈಶ ವಿಠಲದಾಸ ಸ್ವಾಮೀಜಿ ಮಾತನಾಡಿ, ಸಮಸ್ತ ಹಿಂದೂ ಸಮಾಜವನ್ನು ಜಾಗೃತಗೊಳಿಸುವಲ್ಲಿ ಕಾಪು ಮಾರಿಗುಡಿಯು ಮಹತ್ವದ ಪಾತ್ರ ನಿರ್ವಹಿಸುತ್ತಿದೆ. ಹೊಸ ಮಾರಿ ಗುಡಿಯ ಜೀರ್ಣೋದ್ಧಾರ, ಬ್ರಹ್ಮಕಲ ಶೋತ್ಸವ ಧಾರ್ಮಿಕ ಕಾರ್ಯ ಕ್ರಮಗಳಲ್ಲಿಯೂ ಸಮಷ್ಟಿಯ ಹಿತ ಕಾಯ್ದುಕೊಂಡು ಬರುವ ಮೂಲಕ ಶ್ರೇಷ್ಠತೆಯನ್ನು ಮೆರೆಯಲಾಗಿದೆ ಎಂದು ಹೇಳಿದರು.

ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರದ ಮುಖ್ಯಸ್ಥ ಕಲ್ಲಡ್ಕ ಪ್ರಭಾಕರ ಭಟ್‌ ಮಾತನಾಡಿ, ನಮ್ಮನ್ನು ಹೆತ್ತು ಹೊತ್ತು ಸಲಹುವ ಅಮ್ಮನೇ ನಮೆಲ್ಲರನ್ನೂ ಸಂಸ್ಕಾರವಂತರನ್ನಾಗಿ ಬೆಳೆಸುತ್ತಾಳೆ. ಇದಕ್ಕೆ ಪೂರಕವಾಗಿ ಕಾಪು ಮಾರಿಯಮ್ಮನ ದೇವಸ್ಥಾನವು ಧರ್ಮ ಕಾರ್ಯಗಳನ್ನು ಉಳಿಸಿ, ಬೆಳೆಸುವ ಸಂಸ್ಕಾರ ಕೇಂದ್ರವಾಗಿ ಮೂಡಿ ಬರಲಿ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಮಾತನಾಡಿ, ಎಲ್ಲರ ನಿರೀಕ್ಷೆಗೂ ಮೀರಿ ಮಾರಿಗುಡಿ ನಿರ್ಮಾಣಗೊಂಡಿದೆ. ಇದರ ಹಿಂದೆ ದುಡಿದ ಪ್ರತಿಯೊಬ್ಬರ ಶ್ರಮವೂ ಇಲ್ಲಿ ಉಲ್ಲೇಖನೀಯ ಮತ್ತು ಶ್ಲಾಘನೀಯವಾಗಿದೆ ಎಂದರು.

ಮಣಿಪಾಲ ಮಾಹೆಯ ಸಹಕುಲಾಧಿಪತಿ ಡಾ| ಎಚ್‌. ಎಸ್‌. ಬಲ್ಲಾಳ್‌, ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಮನೋಹರ ಎಸ್‌. ಶೆಟ್ಟಿ ಕಾಪು, ಕೊಡವೂರು ಶಿರಡಿ ಸಾಯಿಬಾಬಾ ಮಂದಿರದ ಆಡಳಿತ ಮೊಕ್ತೇಸರ ದಿವಾಕರ ಶೆಟ್ಟಿ ಕೊಡವೂರು, ಶಂಭು ಶೆಟ್ಟಿ ಉಡುಪಿ, ಮಸ್ಕತ್‌ ನ ಉದ್ಯಮಿ ದಿವಾಕರ್‌ ಶೆಟ್ಟಿ ಮಲ್ಲಾರು, ಕಾಪು ಪುರಸಭೆ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅತಿಥಿಗಳಾಗಿದ್ದರು.

ದಾನಿ ಪುರುಷೋತ್ತಮ ಶೆಟ್ಟಿ ದಂಪತಿಯನ್ನು ಸಮ್ಮಾನಿಸಲಾಯಿತು.ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸುಹಾಸ್‌ ಹೆಗ್ಡೆ ನಂದಳಿಕೆ ಉಪಸ್ಥಿತರಿದ್ದರು. ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಯೋಗೀಶ್‌ ವಿ. ಶೆಟ್ಟಿ ಸ್ವಾಗತಿಸಿ, ಪ್ರಸ್ತಾವಿಸಿದರು. ದಾಮೋದರ ಶರ್ಮ ಕಾರ್ಯಕ್ರಮ ನಿರೂಪಿಸಿ, ಅಶೋಕ್‌ ಪಕಳ ವಂದಿಸಿದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

19 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

21 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

21 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

22 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

22 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

22 hours ago