ಕಾಪು: ಕಾಂಗ್ರೆಸ್ ಪಕ್ಷದ ನೂತನ ಸಾರಥಿಯಾಗಿ ಅಧಿಕಾರ ವಹಿಸಿಕೊಂಡ ಡಿ ಕೆ ಶಿವಕುಮಾರ್‍ರವರ ಅಧಿಕಾರ ಪ್ರತಿಜ್ಞಾ ವಿಧಿ ಕಾರ್ಯಕ್ರಮ ವನ್ನು ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಗುರುವಾರ ಕಾಪು ರಾಜೀವ ಭವನದಲ್ಲಿ ಆಚರಿಸಲಾಯಿತು.
ಈ ಸಂದರ್ಭ ಕಾಪು ಕಾಂಗ್ರೆಸ್ ಅಧ್ಯಕ್ಷ ನವೀನ್‍ಚಂದ್ರ ಸುವರ್ಣ ಮಾತನಾಡಿ, ಕರ್ನಾಟಕ ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ಯುವ ನಾಯಕ ಚುಕ್ಕಾಣಿ ಹಿಡಿದಿದ್ದು ಅವರ ನೇತ್ರತ್ವದಲ್ಲಿ ಕಾಂಗ್ರೆಸ್ ಮುಂದಿನ ದಿನಗಳಲ್ಲಿ ಉತುಂಗಕ್ಕೆ ಏರಲಿದೆ. ಬಿಜೆಪಿಯವರ ಸುಳ್ಳು ಪ್ರಚಾರದಿಂದ ಕಾಂಗ್ರೆಸ್ ಸ್ವಲ್ಪ ಮಟ್ಟಿಗೆ ಹಿನ್ನಡೆ ಕಂಡಿದ್ದು, ಮುಂದಿನ ದಿನಗಳಲ್ಲಿ ತನ್ನ ಹಿಂದಿನ ಶಕ್ತಿಶಾಲಿ ನಡೆಯನ್ನು ನಡೆಸಲಿದೆ. ಕಾಂಗ್ರೆಸ್ ಪಕ್ಷವು ತನ್ನ ಗತವೈಭವವನ್ನು ಕಾಣಲಿದೆ. ಕಪು ಕಾಂಗ್ರೆಸ್ ಮಾಜಿ ಸಚಿವ ವಿನಯಕುಮಾರ್ ಅವರ ನಾಯಕತ್ವದಲ್ಲಿ ಕಾಂಗ್ರೆಸ್ ತನ್ನ ಅಧಿಪತ್ಯವನ್ನು ಮುಂದಿನ ಚುನಾವಣೆಯಲ್ಲಿ ನಡೆಸಲಿದೆ. ಯುವ ಕಾಂಗ್ರೆಸ್ಸಿಗರು ಸಂಕಲ್ಪ ಮಾಡಿ ಕಾಂಗ್ರೆಸ್ ಪಕ್ಷವನ್ನು ಒಗ್ಗೂಡಿಸುವ ಪ್ರಯತ್ನ ಮಾಡಬೇಕಿದೆ ಎಂದರು.
ಕೋವಿಡ್19 ಮಾರಕ ಕಾಯಿಲೆಯಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಿದ್ದು, ಆ ಪ್ರಯುಕ್ತ ಕಾಪು ವಿಧಾನಸಭಾ ಕ್ಷೇತ್ರದ 29 ಕಡೆಗಳಲ್ಲಿ ಪ್ರತಿಜ್ಞಾ ವಿಧಿ ಕಾರ್ಯಕ್ರಮ ನಡೆಯಿತು.
ಈ ಸಂದರ್ಭ ಕಾಪು ಕಾಂಗ್ರೆಸ್‍ನ ನಿಯೊಜಿತ ಅಧ್ಯಕ್ಷ ಅಖಿಲೇಶ್ ಕೋಟ್ಯಾನ್, ಪುರಸಭಾ ಉಪಾಧ್ಯಕ್ಷ ಉಸ್ಮಾನ್ ಕಾಪು, ಕಾರ್ತಿಕ್, ಹರೀಶ್ ನಾಯಕ್, ಅಮೀರ್ ಕಾಪು, ಅಶ್ವಿನಿ ಪೂಜಾರಿ, ದೇವರಾಜ್, ಮಾಧವ ಪಾಲನ್ ನಾಗೇಶ್ ಮತ್ತಿತರರು ಉಪಸ್ತಿತರಿದ್ದರು.
ವರದಿ: ಪುರುಷೋತ್ತಮ ಸಾಲಿಯಾನ್
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…