ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಡಿ ಕೆ ಶಿವಕುಮಾರ್‍ ರ ಅಧಿಕಾರ ಪ್ರತಿಜ್ಞಾ ವಿಧಿ ಕಾರ್ಯಕ್ರಮ ಆಚರಣೆ video- vishwanews24

ಕಾಪು: ಕಾಂಗ್ರೆಸ್ ಪಕ್ಷದ ನೂತನ ಸಾರಥಿಯಾಗಿ ಅಧಿಕಾರ ವಹಿಸಿಕೊಂಡ ಡಿ ಕೆ ಶಿವಕುಮಾರ್‍ರವರ ಅಧಿಕಾರ ಪ್ರತಿಜ್ಞಾ ವಿಧಿ ಕಾರ್ಯಕ್ರಮ ವನ್ನು ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಗುರುವಾರ ಕಾಪು ರಾಜೀವ ಭವನದಲ್ಲಿ ಆಚರಿಸಲಾಯಿತು.

ಈ ಸಂದರ್ಭ ಕಾಪು ಕಾಂಗ್ರೆಸ್ ಅಧ್ಯಕ್ಷ ನವೀನ್‍ಚಂದ್ರ ಸುವರ್ಣ ಮಾತನಾಡಿ, ಕರ್ನಾಟಕ ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ಯುವ ನಾಯಕ ಚುಕ್ಕಾಣಿ ಹಿಡಿದಿದ್ದು ಅವರ ನೇತ್ರತ್ವದಲ್ಲಿ ಕಾಂಗ್ರೆಸ್ ಮುಂದಿನ ದಿನಗಳಲ್ಲಿ ಉತುಂಗಕ್ಕೆ ಏರಲಿದೆ. ಬಿಜೆಪಿಯವರ ಸುಳ್ಳು ಪ್ರಚಾರದಿಂದ ಕಾಂಗ್ರೆಸ್ ಸ್ವಲ್ಪ ಮಟ್ಟಿಗೆ ಹಿನ್ನಡೆ ಕಂಡಿದ್ದು, ಮುಂದಿನ ದಿನಗಳಲ್ಲಿ ತನ್ನ ಹಿಂದಿನ ಶಕ್ತಿಶಾಲಿ ನಡೆಯನ್ನು ನಡೆಸಲಿದೆ. ಕಾಂಗ್ರೆಸ್ ಪಕ್ಷವು ತನ್ನ ಗತವೈಭವವನ್ನು ಕಾಣಲಿದೆ. ಕಪು ಕಾಂಗ್ರೆಸ್ ಮಾಜಿ ಸಚಿವ ವಿನಯಕುಮಾರ್ ಅವರ ನಾಯಕತ್ವದಲ್ಲಿ ಕಾಂಗ್ರೆಸ್ ತನ್ನ ಅಧಿಪತ್ಯವನ್ನು ಮುಂದಿನ ಚುನಾವಣೆಯಲ್ಲಿ ನಡೆಸಲಿದೆ. ಯುವ ಕಾಂಗ್ರೆಸ್ಸಿಗರು ಸಂಕಲ್ಪ ಮಾಡಿ ಕಾಂಗ್ರೆಸ್ ಪಕ್ಷವನ್ನು ಒಗ್ಗೂಡಿಸುವ ಪ್ರಯತ್ನ ಮಾಡಬೇಕಿದೆ ಎಂದರು.
ಕೋವಿಡ್19 ಮಾರಕ ಕಾಯಿಲೆಯಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಿದ್ದು, ಆ ಪ್ರಯುಕ್ತ ಕಾಪು ವಿಧಾನಸಭಾ ಕ್ಷೇತ್ರದ 29 ಕಡೆಗಳಲ್ಲಿ ಪ್ರತಿಜ್ಞಾ ವಿಧಿ ಕಾರ್ಯಕ್ರಮ ನಡೆಯಿತು.

ಈ ಸಂದರ್ಭ ಕಾಪು ಕಾಂಗ್ರೆಸ್‍ನ ನಿಯೊಜಿತ ಅಧ್ಯಕ್ಷ ಅಖಿಲೇಶ್ ಕೋಟ್ಯಾನ್, ಪುರಸಭಾ ಉಪಾಧ್ಯಕ್ಷ ಉಸ್ಮಾನ್ ಕಾಪು,  ಕಾರ್ತಿಕ್, ಹರೀಶ್ ನಾಯಕ್, ಅಮೀರ್ ಕಾಪು, ಅಶ್ವಿನಿ ಪೂಜಾರಿ, ದೇವರಾಜ್, ಮಾಧವ ಪಾಲನ್ ನಾಗೇಶ್ ಮತ್ತಿತರರು ಉಪಸ್ತಿತರಿದ್ದರು.

ವರದಿ: ಪುರುಷೋತ್ತಮ ಸಾಲಿಯಾನ್

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

20 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

20 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

20 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

20 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

20 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

20 hours ago