ಕಾಪು : ಮಜೂರು ಗ್ರಾಮ ಪಂಚಾಯತ್ ನ ಎರಡನೇ ಅವಧಿಯ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತರಾದ ಪ್ರಸಾದ್ ಶೆಟ್ಟಿ ವಳದೂರು ಮತ್ತು ಉಪಾಧ್ಯಕ್ಷರಾಗಿ ಮಂಜುಳಾ ಆಚಾರ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
13 ಸದಸ್ಯ ಬಲದ ಮಜೂರು ಗ್ರಾ.ಪಂ. ನಲ್ಲಿ 9 ಬಿಜೆಪಿ, 4 ಕಾಂಗ್ರೆಸ್ ಸದಸ್ಯರಿದ್ದಾರೆ.
ಅಧ್ಯಕ್ಷ ಸ್ಥಾನವು ಸಾಮಾನ್ಯ ಪುರುಷ ಮತ್ತು ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು.
ತೋಟಗಾರಿಕೆ ಇಲಾಖೆ ಅಧಿಕಾರಿ ವರುಣ್ ಜೆ. ಚುನಾವಣಾಧಿಕಾರಿಯಾಗಿದ್ದು, ಪಿಡಿಒ ವಿಲಾಸಿನಿ ಸಹ ಚುನಾವಣಾಧಿಕಾರಿಯಾಗಿ ಸಹಕರಿಸಿದ್ದರು.
ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಬಿಜೆಪಿ ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಶಿಲ್ಪಾ ಜಿ. ಸುವರ್ಣ, ಮಾಜಿ ತಾ.ಪಂ. ಅಧ್ಯಕ್ಷೆ ಶಶಿಪ್ರಭಾ ಶೆಟ್ಟಿ, ಗಂಗಾಧರ್ ಸುವರ್ಣ, ಗ್ರಾ.ಪಂ. ಮಾಜಿ ಅಧ್ಯಕ್ಷರಾದ ಗಣೇಶ್ ಶೆಟ್ಟಿ, ಸಂದೀಪ್ ರಾವ್, ನಿಕಟಪೂರ್ವ ಅಧ್ಯಕ್ಷ ಶರ್ಮಿಳಾ ಆಚಾರ್ಯ, ಉಪಾಧ್ಯಕ್ಷ ಮಧುಸೂದನ್ ಸಾಲಿಯನ್ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…