ಕಾಪು : 11 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಉಡುಪಿ ಕಾಪುವಿನ ಮಣಿಪುರ ಗ್ರಾಮದಲ್ಲಿ ನಡೆದಿದೆ.
ಸಂದೇಶ್ ಅವರ 11 ವರ್ಷದ ಪುತ್ರಿ ಧನ್ವಿ ಎಂಬುವವಳು ಮೃತಪಟ್ಟಿದ್ದಾರೆ. ಧನ್ವಿ 4ನೇ ತರಗತಿ ಮುಗಿಸಿ ಪ್ರಸ್ತುತ ಶಾಲೆಗೆ ರಜೆಯಾಗಿರುವುದರಿಂದ ಮನೆಯಲ್ಲಿಯೇ ಇದ್ದಳು. ಮೇ.8ರಂದು ಧನ್ವಿಯು ರಾತ್ರಿ ಎಲ್ಲರೊಂದಿಗೆ ಊಟ ಮುಗಿಸಿ ಮಲಗಿಕೊಂಡಿದ್ದು, ಮೇ. 9ರಂದು ಬೆಳಿಗಿನ ಜಾವ 3:00 ಗಂಟೆಯ ಸುಮಾರಿಗೆ ಧನ್ವಿಯು ನಿದ್ರೆಯಿಂದ ಎದ್ದು ವಾಂತಿ ಮಾಡಲು ಆರಂಭಿಸಿದ್ದಾಳೆ. ಬಳಿಕ ಧ್ವನಿಗೆ ನೀರನ್ನು ಕೊಟ್ಟು ಮಲಗಿಸಿದ್ದರೂ ಕೂಡಾ ಆಕೆ ಗಂಟೆಗೊಮ್ಮೆ ಎದ್ದು ವಾಂತಿ ಮಾಡುತ್ತಿದ್ದಳು.
ನಂತರ ಮೆ. 9ರ ಬೆಳಿಗ್ಗೆ 9:00 ಗಂಟೆಯ ಸುಮಾರಿಗೆ ಕ್ಲಿನಿಕ್ಪ್ ಒಂದಕ್ಕೆ ಧ್ವನಿಯನ್ನು ಕರೆದುಕೊಂಡು ಹೋದಲ್ಲಿ ಪರೀಕ್ಷಿಸಿದ ವೈದ್ಯರು ಆಕೆಗೆ ಇಂಜೆಕ್ಷನ್ ಹಾಗೂ ಮದ್ದನ್ನು ನೀಡಿ ಗಂಟೆಗೊಮ್ಮ ಓಆರ್‌ಎಸ್ ಪೌಡರ್ ಕೊಡುವಂತೆ ಹಾಗೂ ಗಂಜಿ ಊಟ ನೀಡುವಂತೆ ತಿಳಿಸಿದ್ದಾರೆ. ನಂತರ ಮನೆಗೆ ಬಂದ ಧನ್ವಿಯು ಆರೋಗ್ಯವಾಗಿದ್ದು, ಮಧ್ಯಾಹ್ನ 2:00 ಗಂಟೆಯ ಸುಮಾರಿಗೆ ಕೈಕಾಲು ಸೆಲೆದುಕೊಂಡು ಪಿಟ್ಸ್ ಬಂದ ರೀತಿಯಲ್ಲಿ ವರ್ತಿಸುತ್ತಿದ್ದಳು. ಕೂಡಲೇ ಧ್ವನಿಯ ತಂದೆ ಸಂದೇಶ್ ಆಕೆಯನ್ನು ತನ್ನ ರಿಕ್ಷಾದಲ್ಲಿ ಉಡುಪಿಯ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದಾರೆ. ಆಕೆಯನ್ನು ಪರೀಕ್ಷಿಸಿದ ವೈದ್ಯರು ಧನ್ವಿಯು ಈಗಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಧ್ವನಿಯ ತಂದೆ ಕಾಪು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಠಾಣೆಯಲ್ಲಿ ಯು.ಡಿ.ಆರ್ ಕ್ರಮಾಂಕ 15/2024 ಕಲಂ: 174 ಸಿ.ಆರ್.ಪಿ.ಸಿಯಂತೆ ಪ್ರಕರಣ ದಾಖಲಾಗಿದೆ.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…