ಕಾಪು: ಮಂಗಳೂರಿನಿಂದ ಉಡುಪಿ ಕಡೆಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮರಳು ಅಕ್ರಮವಾಗಿ ಸಾಗಿಸುತ್ತಿದ್ದ ಟಿಪ್ಪರನ್ನು ಕಾಪು ಪೊಲೀಸರು ಮಂಗಳವಾರ ಜಪ್ತಿ ಮಾಡಿದ್ದಾರೆ.
ಕಾಪುವಿನಲ್ಲಿ ಬಂದೋಬಸ್ತ್ ನಲ್ಲಿದ್ದ ಪೊಲೀಸರಿಗೆ ಸಂಚರಿಸುತ್ತಿದ್ದ ಟಿಪ್ಪರ್ನಿಂದ ನೀರು ಇಳಿಯುತ್ತಿರುವುದು ಕಂಡುಬಂದ ಕಾರಣ ಮರಳು ಸಾಗಿಸುತ್ತಿರುವ ಬಗ್ಗೆ ಅನುಮಾನಗೊಂಡು ವಾಹನವನ್ನು ತಡೆದು ನಿಲ್ಲಿಸಿ ಪರಿಶೀಲಿಸಿದಾಗ ಸುಮಾರು 3 ಯೂನಿಟ್ ಮರಳನ್ನು ತುಂಬಿಸಿರುವುದು ಕಂಡುಬಂದಿತು
ಚಾಲಕ, ಶಿರ್ವ ನಿವಾಸಿ ಪ್ರದೀಪ್ನಲ್ಲಿ ವಿಚಾರಿಸಿದಾಗ ಶಿರ್ವ ನಿವಾಸಿ ಲತೀಫ್ಗೆ ಸೇರಿದ ಟಿಪ್ಪರ್ ಆಗಿದ್ದು ಕಳೆದ ಒಂದು ತಿಂಗಳಿನಿಂದ ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ ಬಳಿಯ ಹೊಳೆಯಿಂದ ಮರಳನ್ನು ತೆಗೆಸಿ ಮಾರಾಟ ಮಾಡುತ್ತಿರುವುದಾಗಿ ತಿಳಿಸಿದ್ದರು.
ಲತೀಫ್ ಹಾಗೂ ಪ್ರದೀಪ್ ಜತೆ ಸೇರಿ ಲಾಭ ಮಾಡುವ ಉದ್ದೇಶದಿಂದ ಸರಕಾರಿ ಸ್ವತ್ತಾದ ಖನಿಜವನ್ನು ಕಳವು ಮಾಡಿ ಮಾರಾಟ ಮಾಡಲು ಸಾಗಾಟ ಮಾಡುತ್ತಿರುವುದು ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಿಪ್ಪರ್ ಹಾಗೂ ಮರಳನ್ನು ವಶಪಡಿಸಿಕೊಂಡಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…