Featured

ಕಾಪು: ಮರ ತೆರವುಗೊಳಿಸುವ ಸಂದರ್ಭ ಮರ ಉರುಳಿ ಬಿದ್ದು ಕೂಲಿ ಕಾರ್ಮಿಕ ಸ್ಥಳದಲ್ಲೇ ಮೃತ್ಯು , ಇಬ್ಬರಿಗೆ ಗಾಯ – Vishwanews24

ಕಾಪು: ಮರ ತೆರವುಗೊಳಿಸುವ ಸಂದರ್ಭ ಮರ ಉರುಳಿ ಬಿದ್ದು ಕೂಲಿ ಕಾರ್ಮಿಕ ಸ್ಥಳದಲ್ಲೇ ಮೃತ್ಯು , ಇಬ್ಬರಿಗೆ ಗಾಯ

ಕಾಪು: ಅಪಾಯಕಾರಿಯಾಗಿವಾಲಿದ್ದ ಮರ ತೆರವುಗೊಳಿಸುವ ಸಂದರ್ಭ ಮರ ಉರುಳಿ ಬಿದ್ದು ಕೂಲಿ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟ, ಉಳಿದ ಇಬ್ಬರಿಗೆ ಗಂಭೀರ ಗಾಯಗಳಾದ ಘಟನೆ ಮಜೂರು ಗ್ರಾಮದ ಕರಂದಾಡಿಯಲ್ಲಿ ಆ.2ರ ಸೋಮವಾರ ಮಧ್ಯಾಹ್ನ ನಡೆದಿದೆ.

ಬಿಹಾರ ಜಾರ್ಖಂಡ್ ಮೂಲದ ಸುಧೀರ್ ಪಾಂಜೆ ಮೃತ ಕೂಲಿ ಕಾರ್ಮಿಕನಾಗಿದ್ದು, ಗಾಯಾಳು ಮಾಹಿತಿ ತಿಳಿದುಬರಬೇಕಿದೆ.

ಕರಂದಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬಳಿಯ ಖಾಸಗಿಯವರಿಗೆ ಸೇರಿದ ನಾಗಬನ ಮತ್ತು ಮನೆ ಮೇಲೆ ಅಪಾಯಕಾರಿಯಾಗಿ ವಾಲಿದ್ದ ಗೋಳಿ ಮರವನ್ನು ಕಡಿಯುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಕಡಿದ ಮರ ಉರುಳಿಬಿದ್ದಾಗ ಅದರಡಿ ಮೂವರು ಕಾರ್ಮಿಕರು ಮರದಡಿಗೆ ಸಿಲುಕಿಕೊಂಡಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮತ್ತಿಬ್ಬರನ್ನು ರಕ್ಷಣೆ ಮಾಡಿ ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

1 day ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

1 day ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

1 day ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

1 day ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

1 day ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

1 day ago