Featured

ಕಾಪು : ಮಳೆಗಾಲಕ್ಕೂ ಮುನ್ನ ಕಡಲ್ಕೊರೆತದ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿತ್ತು : JDS ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ – Vishwanews24

ಕಾಪು : ಮಳೆಗಾಲಕ್ಕೂ ಮುನ್ನ ಕಡಲ್ಕೊರೆತದ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿತ್ತು : JDS ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ

ಕಾಪು :ಮಳೆಗಾಲಕ್ಕೂ ಮುನ್ನ ಕಡಲ್ಕೊರೆತದ ಸಮಸ್ಯೆಗೆ ಶಾಶ್ವತ ಪರಿಹಾರ ಜಿಲ್ಲಾಡಳಿತ  ಕಂಡುಕೊಳ್ಳಬೇಕಿತ್ತು ಎಂದು ಮೂಳೂರು ಮತ್ತು ಕಾಪು ಭಾಗದ  ಕಡಲ್ಕೊರೆತ ಪ್ರದೇಶಗಳಿಗೆ ಜುಲೈ 11ರಂದು ಭೇಟಿ ನೀಡಿದ ಜೆಡಿಎಸ್ ಜಿಲ್ಲಾಧ್ಯಕ್ಷ  ಯೋಗೀಶ್ ವಿ ಶೆಟ್ಟಿ ಬಾಲಾಜಿ ಆಗ್ರಹಿಸಿದರು.
ಮಳೆಗಾಲ ಪ್ರಾರಂಭವಾದ ಮೇಲೆ ಕಡಲು ಕೊರೆತದ ಬಗ್ಗೆ ಚಿಂತಿಸುವುದಲ್ಲ. ಮುಂಚಿತವಾಗಿ ಸಮಸ್ಯೆ ಇರುವ ಪ್ರದೇಶಗಳ ಬಗ್ಗೆ ಜಿಲ್ಲಾಡಳಿತ ಯೋಚಿಸುತ್ತಿದ್ದರೆ ಕಾಪು ತಾಲೂಕಿನಲ್ಲಿ  ಕಡಲು ಕೊರೆತದಿಂದ ಸಮಸ್ಯೆ ಆಗುತ್ತಿರಲಿಲ್ಲ
ಮಳೆಗಾಲ ಈಗಷ್ಟೇ ಆರಂಭವಾಗಿದೆ. ಇನ್ನೂ ಹೆಚ್ಚಿನ ಮಳೆ ಬೀಳುವ ಸಂದರ್ಭ ಸಮುದ್ರ ಕೊರೆತ ಉಂಟಾಗಿ ಕೆಲವು ಜಾಗಗಳಿಗೆ, ಮನೆಗಳಿಗೆ ಹಾನಿಯಾಗುವ ಸಂಭವವಿದೆ ಅದನ್ನು ತಡೆಗಟ್ಟಬೇಕಾಗಿದೆ.
ಸರಕಾರ ಸರಿಯಾಗಿ ಟೆಂಡರು ಮಾಡಿ ಅನುದಾನ ಬಿಡುಗಡೆ ಮಾಡಬೇಕಿದೆ.ಇದರಿಂದ ಶಾಶ್ವತ ಪರಿಹಾರ ಮಾಡಿದರೆ ಯಾವುದೇ ಸಮಸ್ಯೆ ಬಾರದು. ಸರಕಾರ ಹಣ ಬಿಡುಗಡೆ ಮಾಡದೆ ಕಾಂಟ್ರ್ಯಾಕ್ಟರ್ ಗಳಿಗೂ ತೊಂದರೆಯಾಗಿದೆ.
ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭ ತೆಂಕ, ಬಡ ಎರ್ಮಾಳು ಪ್ರದೇಶದಲ್ಲಿ 5 ರಿಂದ 6 ಕಿಲೋ ಮೀಟರ್ ವರೆಗೆ 45 ಕೋಟಿ ಹಣ ಮಂಜೂರಾತಿ ಮಾಡಿಸಿ ಕೆಲಸ ಮಾಡಿದ್ದಾರೆ.
ಇದೀಗ ಧನಂಜಯ ಮತ್ತು ದೇವರಾಜ ಎಂಬುವವರ ಮನೆಗಳಿಗೆ ಹತ್ತಿರವಾಗಿ ಕಡಲು ಕೊರೆತ ಆಗುತ್ತಿದೆ. ಅದಕ್ಕೆ ಆದಷ್ಟು ಬೇಗ ವ್ಯವಸ್ಥೆ ಮಾಡಬೇಕಿದೆ. ಇಲ್ಲಿ 150 ರಿಂದ 200 ಮೀಟರ್ ನಷ್ಟು ಕಲ್ಲು ಹಾಕಲು ಬಾಕಿಯಿದೆ. ಇದರಿಂದ ಮನೆಗಳಿಗೆ ತೊಂದರೆಯಾಗಿದೆ. ಈ ಸಮಸ್ಯೆಯನ್ನು ಕೂಡಲೇ ಜಿಲ್ಲಾಡಳಿತ ಬಗೆಹರಿಸಬೇಕೆಂದು ಮನವಿ ಮಾಡುತ್ತೇನೆ ಎಂದರು.
ಈ ಸಂದರ್ಭದಲ್ಲಿ ಜೆಡಿಎಸ್ ಪ್ರಮುಖರು, ಸ್ಥಳೀಯರು ಉಪಸ್ಥಿತರಿದ್ದರು.
Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

1 hour ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

1 hour ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

2 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

2 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

2 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

2 hours ago