ಕಾಪು : ಮಳೆ ನೀರು ನಿಂತು ಹೆದ್ದಾರಿ ವಾಹನ ಸಂಚಾರಕ್ಕೆ ಅಡಚಣೆ – ಅಪಘಾತದ ಭೀತಿ – Vishwanews24

Featured, ಉಡುಪಿ

ಕಾಪು : ಮಳೆ ನೀರು ನಿಂತು ಹೆದ್ದಾರಿ ವಾಹನ ಸಂಚಾರಕ್ಕೆ ಅಡಚಣೆ – ಅಪಘಾತದ ಭೀತಿ

ಪ್ರತಿ ಬಾರಿ ಮಳೆ ಬಂದಾಗಲೂ ಇದೇ ಇಲ್ಲಿನ ಪರಿಸ್ಥಿತಿ ..

ಅವೈಜ್ಞಾನಿಕ ಕಾಮಗಾರಿಯಿಂದಾಗಿ ಹೆದ್ದಾರಿ ಬದಿ ಚರಂಡಿಯಲ್ಲಿ ಮಳೆ ನೀರು ಹರಿದು ಹೋಗದೇ ಸಂಚಾರಕ್ಕೆ ತೊಂದರೆ..

ಸಂಬಂಧ ಪಟ್ಟ ಇಲಾಖೆ ಈ ಬಗ್ಗೆ ಗಮನ ಹರಿಸುತ್ತಿಲ್ಲ : ಸಾರ್ವಜನಿಕರ ಆಕ್ರೋಶ

ಕಾಪು: ಮಂಗಳವಾರ ಬೆಳಗ್ಗೆ ಸುರಿದ ಮಳೆಯಿಂದಾಗಿ ಕಾಪು ಶಿಕ್ಷಣ ಸಂಸ್ಥೆಯ ಮುಂಭಾಗದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನೀರು ನಿಂತು ಹೆದ್ದಾರಿ ಸಂಚಾರಕ್ಕೆ ತೊಂದರೆಯುಂಟಾಗುತ್ತಿದ್ದು, ಅಪಘಾತದ ಭೀತಿಯುಂಟಾಗಿದೆ.

ಪ್ರತಿ ಬಾರಿ ಮಳೆ ಬಂದಾಗಲೂ ಇಲ್ಲಿನ ಪರಿಸ್ಥಿತಿ ಇದೇ ಆಗಿದೆ. ಕಾಪುವಿನಲ್ಲಿರುವ ಮಂಗಳೂರು – ಉಡುಪಿ ಹೆದ್ದಾರಿ ಮತ್ತು ಸರ್ವೀಸ್ ರಸ್ತೆಯಲ್ಲಿ ಸಂಪೂರ್ಣ ನೀರು ನಿಂತು ಹೆದ್ದಾರಿಯಲ್ಲಿ ವಾಹನ ಸಂಚಾರ ದುಸ್ತರವಾಗಿದೆ.

ರಾ. ಹೆ.66 ರ ಚತುಷ್ಪಥ ಯೋಜನೆಯ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಹೆದ್ದಾರಿ ಬದಿಯ ಕೆಲವೆಡೆ ಚರಂಡಿಯಲ್ಲಿ ಮಳೆ ನೀರು ಹರಿದು ಹೋಗದೇ ಸಂಚಾರಕ್ಕೆ ತೊಂದರೆಯುಂಟಾಗುತ್ತಿದೆ.

ಕಾಪು ಶಾಲೆಯ ಬಳಿಯ ಹೆದ್ದಾರಿಯಲ್ಲಿ ಕಳೆದ ಹಲವು ವರ್ಷಗಳಿಂದ ಇದೇ ರೀತಿಯ ಅಸ್ತವ್ಯಸ್ತವಾಗಿದೆ. ಸಂಬಂಧ ಪಟ್ಟ ಇಲಾಖೆ ಈ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಕಾಪು : ಗೋಕರ್ಣ ಸಮುದ್ರ ತೀರದಲ್ಲಿ ಅಪರಿಚಿತ ಶವ ಪತ್ತೆ : ಗುರುತು ಪತ್ತೆಗಾಗಿ ಮನವಿ – Vishwanews24

 

Leave a Reply