ಕಾಪು ಮಹತೋಭಾರ ಶ್ರಿ ಲಕ್ಷ್ಮೀ ಜನಾರ್ದನ ದೇವಸ್ಥಾನದ ವಾರ್ಷಿಕ ಮಹೋತ್ಸವದ ಪ್ರಯುಕ್ತ ಶುಕ್ರವಾರ ವೈಭವದ ಶ್ರೀ ಮನ್ಮಹಾರಥೋತ್ಸವ ನೆರವೇರಿತು.
ದೇವಸ್ಥಾನದ ಪ್ರಧಾನ ತಂತ್ರಿಗಳಾದ ಶ್ರೀಶ ತಂತ್ರಿಯವರ ನೇತೃತ್ವದಲ್ಲಿ ಪ್ರಧಾನ ಅರ್ಚಕರಾದ ನಾರಾಯಣ ತಂತ್ರಿ ಮತ್ತು ವೈದಿಕ ವೃಂದದವರು ನಾನಾ ಧಾರ್ಮಿಕ ಅನುಷ್ಠಾನಗಳನ್ನು ನೆರವೇರಿಸಿದರು. ಬೆಳಗ್ಗೆ 10.30ರ ಮೇಷ ಲಗ್ನದಲ್ಲಿ ರಥಾರೋಹಣ ನಡೆಯಿತು. ಬಳಿಕ ಮಧ್ಯಾಹ್ನ ನಡೆದ ಸಾರ್ವಜನಿಕ ಮಹಾ ಅನ್ನ ಸಂತರ್ಪಣೆಯಲ್ಲಿ ಸಾವಿರಾರು ಭಕ್ತಾದಿಗಳು ಅನ್ನ ಪ್ರಸಾದ ಸ್ವೀಕರಿಸಿದರು.
ದೇವಸ್ಥಾನದ ಗೌರವ ಸಲಹೆಗಾರ ಕೆ.ಪಿ. ಆಚಾರ್ಯ, ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಮೋಹನ್ ಎಂ. ಬಂಗೇರ, ಸಮಿತಿಯ ಮಾಜಿ ಸದಸ್ಯರು ಮತ್ತು ಕಾರ್ಯ ನಿರ್ವಹಣಾಧಿಕಾರಿ ಸುಧೀರ್ ಶೆಟ್ಟಿ, ಶ್ರೀಕರ್ ಶೆಟ್ಟಿ ಕಲ್ಯ,ಕಟ್ಟಡ ನವೀಕರಣ ಸಮಿತಿಯ ಅಧ್ಯಕ್ಷ ಶಶಿಧರ ಶೆಟ್ಟಿ ಎರ್ಮಾಳ್, ಸ್ವರ್ಣ ಕವಚ ಪ್ರಭಾವಳಿ ಸಮರ್ಪಣಾ ಸಮಿತಿಯ ಅಧ್ಯಕ್ಷ ನಡಿಕೆರೆ ರತ್ನಾಕರ್ ಶೆಟ್ಟಿ, ಶಾಸಕ ಲಾಲಾಜಿ ಆರ್ ಮೆಂಡನ್, ಪ್ರಮುಖರಾದ ಉದ್ಯಮಿ ಮನೋಹರ್ ಎಸ್ ಶೆಟ್ಟಿ, ಸುರೇಶ್ ಶೆಟ್ಟಿ ಗುರ್ಮೆ, ಸಚ್ಚಿದಾನಂದ ಶೆಟ್ಟಿ, ಅನಿಲ್ ಬಲ್ಲಾಳ್, ಕಾಪು ದಿವಾಕರ್ ಶೆಟ್ಟಿ, ದೇವಿಪ್ರಸಾದ್ ಶೆಟ್ಟಿ, ಯೋಗೀಶ್ ವಿ.ಶೆಟ್ಟಿ, ರಮೇಶ್ ಹೆಗ್ಡೆ ಕಲ್ಯ, ಮಾಧವ ಆರ್. ಪಾಲನ್, ಶ್ರೀಧರ ಶೆಣೈ, ಪ್ರಸಾದ್ ಶೆಣೈ, ಸಂದೀಪ್ ಶೆಟ್ಟಿ ಕಲ್ಯಾ,ರತ್ನಾಕರ ಶೆಟ್ಟಿ,ಅನಿಲ್ ಕುಮಾರ್,ಕಿರಣ್ ಆಳ್ವಾ , ದೇವಳದ ಸಿಬಂದಿ ವರ್ಗ, ಕಾಪು ಸಾವಿರ ಸೀಮೆಯ ಹತ್ತುಸಮಸ್ತರು ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…