Featured

ಕಾಪು ಮಹತೋಭಾರ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಧ್ವಜಾರೋಹಣ ಸಂಪನ್ನ :vishwanews24

ಕಾಪು:  ಮಹತೋಭಾರ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ಫೆ.12 ರಿಂದ 20 ರವರೆಗೆ ನಡೆಯಲಿರುವ ವಾರ್ಷಿಕ ಮಹೋತ್ಸವದ ಪ್ರಯುಕ್ತ ಬುಧವಾರ ಧ್ವಜಾರೋಹಣ ಸಂಪನ್ನಗೊಂಡಿತು.
ದೇವಳದ ತಂತ್ರಿಗಳಾದ ವೇದಮೂರ್ತಿ ಶ್ರೀಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಅನುಷ್ಠಾನಗಳೊಂದಿಗೆ ಬೆಳಗ್ಗೆ 9.00 ರ ಕುಂಭ  ಲಗ್ನದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮನೋಹರ್ ಎಸ್ ಶೆಟ್ಟಿ, ಕೆಪಿ ಆಚಾರ್ಯ, ಕಾರ್ಯನಿರ್ವಾಹಣಾಧಿಕಾರಿ ಅಶೋಕ್ ಎನ್ ಕೊಟೇಕಾರ್,ವ್ಯವಸ್ಥಾಪನ ಸಮಿತಿಯ ಸದಸ್ಯರಾದ ನಾರಾಯಣ ತಂತ್ರಿ,ನಾಗಾರಾಜ್,ಶ್ರೀಮತಿ ಅಶ್ವಿನಿ, ಶ್ರೀಮತಿ ಶಾಂತಾಲತಾ ಶೆಟ್ಟಿ,ಶಶಿಧರ ಸುವರ್ಣ, ಸದಾನಂದ ಎ ಸುವರ್ಣ, ಶ್ರೀಕಾಂತ್ ಕಾಪು,ರವಿ ಕುಮಾರ್ ಮಂದಾರ,ಹೊಸ ಮಾರಿಗುಡಿ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ,ಪ್ರಮುಖರಾದ ಕಾಪು ದಿವಾಕರ ಶೆಟ್ಟಿ,ಯೋಗಿಶ್ ಶೆಟ್ಟಿ, ಅನಿಲ್ ಕುಮಾರ್,ರಮೇಶ್ ಹೆಗ್ಡೆ ಕಲ್ಯಾ,ಲಕ್ಷ್ಮೀಶ ತಂತ್ರಿ, ಮೊದಲಾದವರು ಉಪಸ್ಥಿತರಿದ್ದರು.
ಫೆ 18 ರಂದು ಶ್ರೀ ಮನ್ಮಹಾರಥೋತ್ಸವ: ಕ್ಷೇತ್ರದ ವರ್ಷಾವಧಿ ಮಹೋತ್ಸವದ ಪ್ರಯುಕ್ತ ಫೆ.18ರಂದು ಶ್ರೀ ಮನ್ಮಹಾರಥೋತ್ಸವ ಸಂಪನ್ನಗೊಳ್ಳಲಿದೆ. ನಾನಾ ಧಾರ್ಮಿಕ ಅನುಷ್ಠಾನಗಳೊಂದಿಗೆ ಆ ದಿನ ಬೆಳಗ್ಗೆ 10.30 ರ ಮೇಷ ಲಗ್ನದಲ್ಲಿ ರಥಾವರೋಹಣ ನಡೆಯಲಿದ್ದು, ಮಧ್ಯಾಹ್ನ ಸಾರ್ವಜನಿಕ ಮಹಾ ಅನ್ನಸಂತರ್ಪಣೆ ಜರುಗಲಿದೆ. ರಾತ್ರಿ 8 ಗಂಟೆಗೆ ಶ್ರೀ ಮನ್ಮಹಾರಥೋತ್ಸವ ಬಳಿಕ, ಉತ್ಸವ ಬಲಿ, ಕಟ್ಟೆ ಪೂಜೆ, ಭೂತ ಬಲಿ, ಶಯನ ಸಹಿತ ಧಾರ್ಮಿಕ ಅನುಷ್ಠಾನಗಳೊಂದಿಗೆ ವರ್ಷಾವಧಿ ಉತ್ಸವ ಸಂಪನ್ನಗೊಳ್ಳಲಿದೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

2 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

2 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

2 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

2 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

3 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

3 hours ago