Featured

ಕಾಪು : ಮಾನಸಿಕ ಖಿನ್ನತೆಯಿಂದ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ – Vishwanews24

ಕಾಪು : ಮಾನಸಿಕ ಖಿನ್ನತೆಯಿಂದ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ

ಕಾಪು: ತಾಲೂಕಿನ ಮಡಂಬು ಎಂಬಲ್ಲಿ ಯುವತಿಯೊಬ್ಬಳು ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಇದು ಆಕಸ್ಮಿಕ ಸಾವಲ್ಲ ಬದಲಾಗಿ ಆತ್ಮಹತ್ಯೆ ಎಂಬುವುದಾಗಿ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಡುಂಬು ಗೋಪಾಲ್ ಶೆಟ್ಟಿ ಅವರ ಪುತ್ರಿ ಶರ್ಮಿಳಾ (22) ಮೃತ ಯುವತಿ. ಗುರುವಾರ ಬೆಳಗ್ಗೆ ಬೆಂಗಳೂರಿನಿಂದ ಊರಿಗೆ ಬಂದ್ದ ಶರ್ಮಿಳಾ ಮನೆ ಸಮೀಪದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

ಪ್ರಕರಣ ವಿವರ: ಮಡುಂಬು ಕೊಲ್ಲಂಗಾಲ್ ಹೌಸ್ ನಿವಾಸಿ ಗೋಪಾಲ ಶೆಟ್ಟಿಯವರ ಪುತ್ರಿ ಹಾಗೂ ಪಿರ್ಯಾದಿದಾರರಾದ ವಿಕೇಶ್ ಶೆಟ್ಟಿಯವರ ತಂಗಿ ಶರ್ಮಿಳಾ(22)ರವರು ಕಳೆದ ಸುಮಾರು 8 ತಿಂಗಳಿನಿಂದ ಬೆಂಗಳೂರಿನಲ್ಲಿ ಸಾಫ್ಟ್ ವೇರ್‌ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಆಕೆ ಸುಮಾರು ಒಂದು ವಾರದಿಂದ ಮಾನಸಿಕ ಖಿನ್ನತೆಗೆ ಒಳಗಾಗಿರುವ ವಿಚಾರ ಆಕೆಯ ಸಹದ್ಯೋಗಿಗಳಿಂದ ವಿಕೇಶ್ ಶೆಟ್ಟಿ ರವರಿಗೆ ತಿಳಿದು ಬಂದಿತ್ತು. ಸುಮಾರು 3 ದಿನಗಳಿಂದ ಆಕೆ ತಾನು ವಾಸವಿದ್ದ ಪಿಜಿಯಿಂದ ಯಾರಿಗೂ ಹೇಳದೇ ಕುಣಿಗಲ್‌ಗೆ ಹೋಗಿದ್ದಳು. ಈ ವಿಚಾರವನ್ನು ವಿಕೇಶ್ ಗೆ ಆಕೆಯ ಸ್ನೇಹಿತರು ತಿಳಿಸಿದ್ದು ಈ ಬಗ್ಗೆ ವಿಕೇಶ್ ಶೆಟ್ಟಿ ರವರು ವಾಪಾಸು ಬೆಂಗಳೂರಿಗೆ ಹೊಗುವಂತೆ ಶರ್ಮಿಳಾಗೆ ಪೋನ್ ಕರೆ ಮಾಡಿ ತಿಳಿಸಿದ್ದಾರೆ.

ಜೂನ್ ೨೮ರಂದು ಶರ್ಮಿಳಾಳು ವಿಕೇಶ್ ಶೆಟ್ಟಿ ರವರಿಗೆ ಕರೆಮಾಡಿ ತಾನು ಒಂದು ತಿಂಗಳ ಅವಧಿಗೆ ಮನೆಗೆ ಬಂದು ಹೋಗುತ್ತೇನೆಂದು ತಿಳಿಸಿದ್ದು ಅದರಂತೆ ದಿನಾಂಕ 30ರಂದು ಬೆಳಿಗ್ಗೆ 7:45ಕ್ಕೆ ಮನೆಗೆ ಬಂದಿದ್ದು ತನ್ನ ಲಗೇಜನ್ನು ಮನೆಯ ಒಳಗೆ ಇಟ್ಟು ಶೌಚಾಲಯಕ್ಕೆ ಹೋಗುತ್ತೇನೆಂದು ಹೇಳಿ ಹೋದವಳು ತುಂಬಾ ಹೊತ್ತಾದರೂ ವಾಪಾಸು ಬಾರದೇ ಇದ್ದ ಕಾರಣ ವಿಕೇಶ್ ಶೆಟ್ಟಿ ರವರು ನೆರೆಕರೆಯ ನಿವಾಸಿಗಳೊಂದಿಗೆ ಸುತ್ತಮುತ್ತಲಿನ ಪರಿಸರದಲ್ಲಿ ಹುಡುಕಾಡಿದ್ದಾರೆ. ಎಲ್ಲಿಯೂ ಪತ್ತೆಯಾಗದ ಕಾರಣ ಮನೆಯ ಪಕ್ಕದ ಬಾವಿಯಲ್ಲಿ ಬಿದ್ದಿರಬಹುದು ಎಂದು ಅನುಮಾನಗೊಂಡು ಸುರೇಶ ಎಂಬವರ ಮುಖಾಂತರ ಪಾತಾಳ ಗರುಡವನ್ನು ಬಾವಿಗೆ ಹಾಕಿ ಹುಡುಕಿದಾಗ ಶರ್ಮಿಳಾ ದೇಹವು ಮೇಲೆ ಬಂದಿದ್ದು ಆಕೆಯು ಮೃತಪಟ್ಟಿರುವುದಾಗಿ ಕಂಡು ಬಂತು.

ಶರ್ಮಿಳಾಳು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಪಕ್ಕದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವುದಾಗಿದೆ. ಈ ಬಗ್ಗೆ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

20 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

20 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

20 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

20 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

20 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

21 hours ago