Featured

ಕಾಪು: ಮಾರಿಯಮ್ಮ ದೇವಿಯ ಪವಾಡವೇ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರಕ್ಕೆ ಆಧಾರ : ಸಂತೋಷ ಶೆಟ್ಟಿ – vishwanews24

ಕಾಪು: ಮಾರಿಯಮ್ಮ ಪ್ರತಿಷ್ಠಾ ಬ್ರಹ್ಮಕಲಶೋತ್ಸವ : ಬುಧವಾರ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮ

ಐತಿಹಾಸಿಕ ನಿರ್ಮಾಣ ಯೋಜನೆಯು ಕಾಪುವಿನ ಚಿತ್ರಣವನ್ನು ಬದಲಿಸಿದೆ..

ಮುಂದಿನ ದಿನಗಳಲ್ಲಿ ಹೊಸ ಮಾರಿಗುಡಿಯನ್ನು ಪ್ರತಿದಿನ ದೇವರ ದರ್ಶನಕ್ಕೆ ತೆರೆದಿಡಲು ಸಂಕಲ್ಪಿಸಲಾಗಿದೆ : ರತ್ನಾಕರ ಶೆಟ್ಟಿ ನಡಿಕೆರೆ

ಕಾಪು: ಮಾರಿಯಮ್ಮ ದೇವಿಯ ಪವಾಡವೇ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರಕ್ಕೆ ಆಧಾರವಾ ಗಿದ್ದು, ಅದೆಷ್ಟೋ ವರ್ಷಗಳ ತಪಸ್ಸು,ಕಠಿನ ಪರಿಶ್ರಮ ಮತ್ತು ಭಕ್ತ ಸಂದೋಹದ ಸೇವೆಯ ಫಲವಾಗಿ ಹೊಸ ಮಾರಿಗುಡಿನಿರ್ಮಾಣಗೊಂಡಿದೆ. ನಾವು ಅಮ್ಮನಿಂದ ಪಡೆದಿರುವುದನ್ನು ಅಮ್ಮನಿಗೇ ಸಮರ್ಪಿಸುವ ಪುಣ್ಯ ಕಾರ್ಯದಲ್ಲಿ ಭಾಗಿಗಳಾಗುತ್ತಿದ್ದೇವೆ. ಮುಂದೆ ನಡೆಯಲಿರುವ ಪ್ರತಿಷ್ಠಾ ಬ್ರಹ್ಮಕಲಶೋ ತ್ಸವದ ಮೂಲಕ ಅಮ್ಮನ ಆರಾಧನೆಗೆ ಮತ್ತಷ್ಟು ಶಕ್ತಿ ತುಂಬಿದಂತಾಗುತ್ತದೆ ಎಂದು ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್‌ ಶೆಟ್ಟಿ ಇನ್ನಾಕುರ್ಕಿಲ್‌ ಬೆಟ್ಟು ಬಾಳಿಕೆ ಹೇಳಿದರು.

ದೇವಸ್ಥಾನದಲ್ಲಿ ನಡೆಯುತ್ತಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಬುಧವಾರ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ ಮಾತನಾಡಿ, ಕಾಪುವಿನ ಅಮ್ಮನ ಸನ್ನಿಧಾನದಲ್ಲಿ ನಡೆದಿರುವ ಜೀರ್ಣೋದ್ಧಾರ ಯೋಜನೆಗಳು ನಮ್ಮೆಲ್ಲರ ಪಾಲಿಗೆ ಸಿಕ್ಕಿರುವ ದೊಡ್ಡ ಸೌಭಾಗ್ಯ. ಐತಿಹಾಸಿಕ ನಿರ್ಮಾಣ ಯೋಜನೆಯು ಕಾಪುವಿನ ಚಿತ್ರಣವನ್ನು ಬದಲಿಸಿದೆ. ಮುಂದಿನ ದಿನಗಳಲ್ಲಿ ಹೊಸ ಮಾರಿಗುಡಿಯನ್ನು ಪ್ರತಿದಿನ ದೇವರ ದರ್ಶನಕ್ಕೆ ತೆರೆದಿಡಲು ಸಂಕಲ್ಪಿಸಲಾಗಿದೆ ಎಂದರು.

ಸಮಿತಿ ಕಾರ್ಯಾಧ್ಯಕ್ಷ ಮತ್ತು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಅವರು ನಟರಾಜ ಪರ್ಕಳ ಬರೆದಿರುವ “ನವದುರ್ಗಾ ಚರಿತಂ’ ಪುಸ್ತಕವನ್ನು ಬಿಡುಗಡೆಗೊಳಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ವಿಶ್ವ ದೇವಾಡಿಗ ಮಹಾಮಂಡಲದ ಅಧ್ಯಕ್ಷ ಧರ್ಮಪಾಲ ದೇವಾಡಿಗ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌, ಕಚ್ಚಾರು ಶ್ರೀ ಕ್ಷೇತ್ರದ ಆಡಳಿತ ಧರ್ಮದರ್ಶಿ ಗೋಕುಲ್‌ದಾಸ್‌, ಮಲ್ಲಾರು ರಾಣೆಯರ್‌ ಸಮಾಜ ಸೇವಾ ಸಂಘದ ಅಧ್ಯಕ್ಷ ನಾಗಾರ್ಜುನ ಕಾಪು ಶುಭಾಶಂಸನೆಗೈದರು.

ಬೆಂಗಳೂರು ಸಮಿತಿ ಅಧ್ಯಕ್ಷ ಉಪೇಂದ್ರ ಶೆಟ್ಟಿ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಪ್ರಧಾನ ಸಂಚಾಲಕ ಚಂದ್ರಹಾಸ ಡಿ. ಶೆಟ್ಟಿ ಬಂಟ್ವಾಳ, ಉದ್ಯಮಿ ಯುವರಾಜ್‌ ಸಾಲ್ಯಾನ್‌ ಮಸ್ಕತ್‌ ಉಪಸ್ಥಿತರಿದ್ದರು.

ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಯೋಗೀಶ್‌ ವಿ. ಶೆಟ್ಟಿ ಬಾಲಾಜಿ ಸ್ವಾಗತಿಸಿ, ಪ್ರಸ್ತಾವಿಸಿದರು. ವೇದಿಕೆ ಸಮಿತಿಯ ದಾಮೋದರ ಶರ್ಮಾ ಕಾರ್ಯಕ್ರಮ ನಿರೂಪಿಸಿ, ಅಶೋಕ್‌ ಪಕಳ ವಂದಿಸಿದರು.

 

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

10 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

10 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

10 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

11 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

11 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

11 hours ago