ಕಾಪು: ನಬಾರ್ಡ್ ನಿಯೋಜಿತ ಅಧ್ಯಯನ ತಂಡವು ಕಾಪು ತಾಲ್ಲೂಕಿನ ಪಡುಬಿದ್ರಿ, ಬೆಳಪು ಹಾಗೂ ಮೂಳೂರಿಗೆ ಮಾ. 20ರಂದು ಭೇಟಿ ನೀಡಲಿದೆ.
ನಬಾರ್ಡ್ ನಿಯೋಜಿತ ಅಧ್ಯಯನ ತಂಡವು 2 ದಿನಗಳ ಅಧ್ಯಯನಕ್ಕಾಗಿ ಅವಿಭಜಿತ ದ.ಕ. ಜಿಲ್ಲೆಗೆ ಆಗಮಿಸಲಿದ್ದು, ಕಳೆದ 5 ವರ್ಷಗಳಿಂದ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾಧಿಸಿದ ಅದ್ಭುತ ಪ್ರಗತಿಯ ಹಿನ್ನೆಲೆಯಲ್ಲಿ ಮಾ.20ರ ಸಂಜೆ ಪಡುಬಿದ್ರಿ ಸೇವಾ ಸಹಕಾರಿ ಸೊಸೈಟಿಗೆ ಭೇಟಿ ನೀಡಲಿದೆ.
ಅಧ್ಯಯನ ತಂಡದಲ್ಲಿ ಕಾರ್ಮಿಕ ಸಚಿವ ಅರಬೈಲು ಶಿವರಾಮ ಹೆಬ್ಬಾರ್ ಸಹಿತ ರಾಜ್ಯದ ನಾನಾ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ಗಳ ಅಧ್ಯಕ್ಷರು-ನಿರ್ದೇಶಕರು, ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರು, ನಿರ್ದೇಶಕರು ಸೇರಿ 24 ಮಂದಿ ಇದ್ದಾರೆ.
ಈ ಸಂದರ್ಭ ಅಧ್ಯಯನ ತಂಡವನ್ನು ಪಡುಬಿದ್ರಿ ಬಸ್ಸು ನಿಲ್ದಾಣದಲ್ಲಿ ಸ್ವಾಗತಿಸಿ ಕೋವಿಡ್ ನಿಯಮಾನುಸಾರ ಸಾಮಾಜಿಕ ಅಂತರದೊಂದಿಗೆ ಮೆರವಣಿಗೆ ಮೂಲಕ ಬ್ಯಾಂಕ್ ಆವರಣಕ್ಕೆ ಕರೆದೊಯ್ಯಲಾಗುವುದು.
ತಂಡವು ಪಡುಬಿದ್ರಿ ಸೊಸೈಟಿಯ ಕೇಂದ್ರ ಕಛೇರಿ, ಶಾಖಾ ಕಛೇರಿಗಳಿಗೆ ಭೇಟಿ ನೀಡಲಿದೆ. ಬಳಿಕ ತಂಡಕ್ಕೆ ಪಡುಬಿದ್ರಿ ಸೊಸೈಟಿಯ ಕಳೆದ 5 ವರ್ಷಗಳ ಆರ್ಥಿಕ ಪ್ರಗತಿ, ಕಾರ್ಯವೈಖರಿ ಸಹಿತ ಸಮಗ್ರ ಮಾಹಿತಿಯನ್ನು ಸಾಕ್ಷ್ಯ ಚಿತ್ರ ಮೂಲಕ ಮನದಟ್ಟು ಮಾಡಲಾಗುವುದು. ನಂತರ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ : ಉಡುಪಿ : ಹೋಟೆಲ್ ದುರ್ಗಾ ಇಂಟರ್‌ನ್ಯಾಷನಲ್‌ನಲ್ಲಿ ವೇಶ್ಯಾವಾಟಿಕೆ ದಂಧೆ ; ಮೂವರ ಬಂಧನ -Vishwanews24
ಇದೇ ವೇಳೆ ಅಧ್ಯಯನ ತಂಡವು ದೇವಿಪ್ರಸಾದ್ ಶೆಟ್ಟಿ ನೇತೃತ್ವದ ಬೆಳಪು ಸೊಸೈಟಿಗೆ ಭೇಟಿ ನೀಡಲಿದ್ದು, ನಬಾರ್ಡ್ ಯೋಜನೆಯ ಬಗ್ಗೆ ಅಧ್ಯಯನ ನಡೆಸಲಿದೆ. ಅಲ್ಲಿಂದ ತಂಡವು ಮೂಳೂರು ಸಾಯಿರಾಧಾ ಹೆರಿಟೇಜ್‍ಗೆ ಭೇಟಿ ನೀಡಲಿದೆ. ಅಲ್ಲಿ ನವೋದಯ ಸ್ವಸಹಾಯ ಸಂಘಗಳ ಸದಸ್ಯರು ಉತ್ಪಾದಿಸಿದ ಉತ್ಪನ್ನಗಳ ವಸ್ತು ಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪಡುಬಿದ್ರಿ ಸೊಸೈಟಿಯ ಅಧ್ಯಕ್ಷ ವೈ.ಸುಧೀರ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ಭಾರತ-ಪಾಕ್ ನಡುವೆ ಶಾಂತಿ ಸ್ಥಾಪಿಸುವುದಕ್ಕೆ ಮೊದಲ ಹೆಜ್ಜೆಯನ್ನು ಭಾರತವೇ ಇಡಬೇಕು : ಇಮ್ರಾನ್ ಖಾನ್ -Vishwanews24
ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…