ಕಾಪು : ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಹಾಗೂ ಶ್ರೀ ಸಾಯಿ ಸಾಂತ್ವಾನ ಮಂದಿರ ಟ್ರಸ್ಟ್ ನ ಆಶ್ರಯದಲ್ಲಿ ಶ್ರೀ ಮುಖ್ಯಪ್ರಾಣ ದೇವರ 19 ಅಡಿ ಎತ್ತರದ ಶಿಲಾಮೂರ್ತಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಇದೇ ಮಾ.31ರಿಂದ ಎಪ್ರಿಲ್ 3ರವರೆಗೆ ಶ್ರೀಕ್ಷೇತ್ರ ಶಂಕರಪುರದಲ್ಲಿ ನಡೆಯಲಿದೆ ಎಂದು ಶ್ರೀ ಸಾಯಿ ಈಶ್ವರ್ ಗುರೂಜಿ ತಿಳಿಸಿದರು.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಶಿಲಾಮೂರ್ತಿಯನ್ನು ಮಾರ್ಚ್ 14 ರಂದು ಉಡುಪಿ ಜೋಡುಕಟ್ಟೆಯಿಂದ ಭವ್ಯ ಮೆರವಣಿಗೆಯಲ್ಲಿ ಶ್ರೀ ಕ್ಷೇತ್ರಕ್ಕೆ ತರಲಾಗುವುದು. ಮಾರ್ಚ್ 26ರಂದು ಹನುಮ ಜನ್ಮ ಭೂಮಿಯಿಂದ ರಾಮನವಮಿಯಂದು ಹನುಮ ಜ್ಯೋತಿ ಮತ್ತು ಹನುಮ ಧ್ವಜವು ಹೊರಟು ಮಾರ್ಚ್ 29ಕ್ಕೆ ಉಡುಪಿ ತಲುಪಲಿದೆ. ಉಡುಪಿ ಜೋಡುಕಟ್ಟೆಯಿಂದ ಭವ್ಯ ಮೆರವಣಿಗೆಯಿಂದ ಹನುಮ ಜ್ಯೋತಿ, ಹನುಮಧ್ವಜ ಹಾಗೂ ಅವಧೂತ ಭಗವಾನ್ ನಿತ್ಯಾನಂದ ಸ್ವಾಮಿಯ 200ಕೆಜಿ ತೂಕದ ಪಂಚಲೋಹ ಮೂರ್ತಿಯನ್ನು ಶ್ರೀ ಕ್ಷೇತ್ರಕ್ಕೆ ತರಲಾಗುತ್ತದೆ ಎಂದರು.
ಇದನ್ನೂ ಓದಿ:
ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ವೀಣಾ ಎಸ್. ಶೆಟ್ಟಿ, ಗೀತಾಂಜಲಿ ಎಂ. ಸುವರ್ಣ, ಅಭಿರಾಜ್ ಎಂ. ಸುವರ್ಣ, ವಿಜಯ ಕೊಡವೂರು, ಇದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…