ಕಾಪು : ಕರಾವಳಿ ಕರ್ನಾಟಕದಲ್ಲಿ ಮೀನುಗಾರಿಕೆ ವೃತ್ತಿಯು ಪ್ರಮುಖವಾಗಿದ್ದು ಈ ವೃತ್ತಿಯಲ್ಲಿ ಮೊಗವೀರರು ಸೇರಿದಂತೆ ವಿವಿಧ ಜಾತಿಗಳು, ಧರ್ಮಗಳ ಜನರು ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.
ರಾಜ್ಯದ ಮೀನುಗಾರರ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿ ಆ ಮೂಲಕ ಅವರೆಲ್ಲರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಯುವ ನಾಯಕ ರಾಹುಲ್ ಗಾಂಧಿಯವರು ಎಪ್ರಿಲ್ 27 ರಂದು ಉಚ್ಚಿಲ ಮಹಾಲಕ್ಷ್ಮಿ ದೇವಳದ ಸಭಾಂಗಣದಲ್ಲಿ ನಡೆಯಲಿರುವ ಮೀನುಗಾರರ ಪ್ರತಿನಿಧಿಗಳ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಪು ವಿಧಾನಸಭಾ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ತಿಳಿಸಿದರು. ಅವರು ಬುಧವಾರ ಕಾಪು ರಾಜೀವ ಭವನದಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ರಾಹುಲ್ ಗಾಂಧಿಯವರು ಹೆಲಿಕಾಪ್ಟರ್ ಮೂಲಕ 3:40 ಕ್ಕೆ ಆದಿ ಉಡುಪಿಗೆ ಆಗಮಿಸಲಿದ್ದಾರೆ. ಕಟಪಾಡಿಯಲ್ಲಿ ಅದ್ದೂರಿ ಸ್ವಾಗತವನ್ನು ಕೋರಲಿದ್ದು, ಮೂಳೂರು ಉಚ್ಚಿಲದಲ್ಲಿಯೂ ಕಾರ್ಯಕರ್ತರು, ಪಕ್ಷದ ಮುಖಂಡರು, ಹಿತೈಷಿಗಳು ಸೇರಿ ಅವರನ್ನು ಸ್ವಾಗತಿಸಲಿದ್ದಾರೆ. ಅಲ್ಲಿಂದ ನೇರವಾಗಿ ಉಚ್ಚಿಲ ಮಹಾಲಕ್ಷ್ಮಿ ದೇವಳಲದ ಸಭಾಂಗಣದಲ್ಲಿ ಜರಗುವ ಸಂವಾದದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಎರಡು ಸಾವಿರ ಜನ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭ ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ನವೀನ್ ಚಂದ್ರ ಸುವರ್ಣ, ಕೇರಳದ ಸಂಸದರಾದ ಪ್ರತಾಪನ್, ಕೇರಳ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ನೌಷಾದ್, ರಾಜ್ಯ ಮೀನುಗಾರ ಸಂಘಟನೆ ಅಧ್ಯಕ್ಷ ಮಂಜುನಾಥ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶಾಂತಲತಾ, ಸ್ಥಳೀಯ ಪ್ರಚಾರ ಸಮಿತಿ ಅಧ್ಯಕ್ಷ ಜಿತೇಂದ್ರ ಫುಟಾರ್ಡೊ, ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷರಾದ ಹರೀಶ್ ಕಿಣಿ, ಕಾಂಗ್ರೆಸ್ ಪಕ್ಷದ ಪ್ರಮುಖರಾದ ಗಫೂರ್, ನವೀನ್ ಚಂದ್ರ ಶೆಟ್ಟಿ, ದೇವಿ ಪ್ರಸಾದ್ ಶೆಟ್ಟಿ, ರಾಜಶೇಖರ ಕೋಟ್ಯಾನ್, ಹರೀಶ್ ನಾಯಕ್, ದಿನೇಶ್ ಫಲಿಮಾರು, ವಿಶ್ವಾಸ್ ಅಮೀನ್, ರಮೀಝ್ ಹುಸೇನ್, ಶರ್ಫುದ್ದೀನ್, ವಿಲ್ಸನ್ ರೊಡ್ರಿಗಸ್ ಮತ್ತಿತರರು ಉಪಸ್ಥಿತರಿದ್ದರು.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…