ಕಾಪು : ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಆಯತಪ್ಪಿ ದೋಣಿಯೊಳಗೆ ಅಳವಡಿಸಿರುವ ವಾಡಿ ಮೇಲೆ ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ಉದ್ಯಾವರ ಗ್ರಾಮದ ಪಿತ್ರೋಡಿ ಎಂಬಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ಅನಿಲ್ (46) ಮೃತಪಟ್ಟವರು. ಇವರು ಪಿತ್ರೋಡಿಯ ವಾಸು ರವರಿಗೆ ಸಂಬಂಧಿಸಿದ ದೋಣಿಯಲ್ಲಿ ಮೀನು ಹಿಡಿಯಲು ಭರತೇಶ ಎಂಬುವವರೊಂದಿಗೆ ಹೋಗಿ ಉದ್ಯಾವರ ಗ್ರಾಮದ ಪಿತ್ರೋಡಿಯ ಪಾಪನಾಶಿನಿ ಹೊಳೆಯಲ್ಲಿ ಬಲೆ ಬೀಸುತ್ತಿದ್ದಾಗ ಆಯತಪ್ಪಿ ದೋಣಿಯೊಳಗೆ ಅಳವಡಿಸಿರುವ ವಾಡಿ ಮೇಲೆ ತಲೆ ಕೆಳಗಾಗಿ ಬಿದ್ದಿದ್ದರು. ಕೂಡಲೇ ಅವರನ್ನು ಭರತೇಶರವರು ಉಡುಪಿಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಪರೀಕ್ಷಿಸಿದ ವೈದ್ಯರು ಅನಿಲ್‍ರವರು ಈಗಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…