Featured

ಕಾಪು  : ಮುದರಂಗಡಿ ಗ್ರಾ.ಪಂ. ಬಹುಮತವಿಲ್ಲದಿದ್ದರೂ ಅಧ್ಯಕ್ಷ ಸ್ಥಾನ ಪಡೆದುಕೊಂಡ ಕಾಂಗ್ರೆಸ್  – Vishwanews24

ಕಾಪು  : ಮುದರಂಗಡಿ ಗ್ರಾ.ಪಂ. ಬಹುಮತವಿಲ್ಲದಿದ್ದರೂ ಅಧ್ಯಕ್ಷ ಸ್ಥಾನ ಪಡೆದುಕೊಂಡ ಕಾಂಗ್ರೆಸ್

ಕಾಪು ವಿಧಾನಸಭಾ ಕ್ಷೇತ್ರದ ಮದರಂಗಡಿ ಗ್ರಾಮ ಪಂಚಾಯತ್ ನಲ್ಲಿ ಬಿಜೆಪಿ ಬಹುಮತವಿದ್ದರೂ, ಮೀಸಲಾತಿಯಿಂದಾಗಿ ಅಧ್ಯಕ್ಷ ಸ್ಥಾನ ಕಳಕೊಂಡು, ಉಪಾಧ್ಯಕ್ಷ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

ಮುದರಂಗಡಿ ಗ್ರಾಮ ಪಂಚಾಯತ್ ನಲ್ಲಿ ಒಟ್ಟು 15 ಸದಸ್ಯರಿದ್ದು, ಬಿಜೆಪಿ ಬೆಂಬಲಿತ 10 ಮತ್ತು ಕಾಂಗ್ರೆಸ್ ಬೆಂಬಲಿತ 5 ಸದಸ್ಯರಿದ್ದಾರೆ. ಇಂದು ನಡೆದ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಅಧ್ಯಕ್ಷ ಸ್ಥಾನವು ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿತ್ತು. ಆದರೆ 10 ಸದಸ್ಯರ ಬಲವಿದ್ದರೂ, ಪರಿಶಿಷ್ಟ ಜಾತಿ ಮಹಿಳೆ ಬಿಜೆಪಿಯಲ್ಲಿ ಇಲ್ಲದಿರುವುದರಿಂದ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ. ಕೇವಲ 5 ಸದಸ್ಯ ಬಲವಿದ್ದರೂ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಗೆದ್ದುಕೊಂಡು ಸಂಭ್ರಮಿಸಿದೆ. ಪರಿಶಿಷ್ಟ ಜಾತಿ ಮೀಸಲಾತಿಯಿಂದಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯ ನಮಿತಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಮೋಹಿನಿ ಹೆಗ್ಡೆ ಅವಿರೋಧ ಆಯ್ಕೆಯಾಗಿದ್ದು, ಸ್ಪಷ್ಟ ಬಹುಮತವಿದ್ದ ರೂ ಮೀಸಲಾತಿಯಿಂದಾಗಿ ಅಧ್ಯಕ್ಷ ಸ್ಥಾನ ಕಳೆದು ಕೊಂಡು ಕೇವಲ ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ತೃಪ್ತಿ ಪಡುವಂತಾಗಿದೆ.

ಬಹುಮತವಿಲ್ಲದಿದ್ದರೂ ಅಧ್ಯಕ್ಷ ಸ್ಥಾನ ಪಡಕೊಂಡ ಕಾಂಗ್ರೆಸ್ ಮುದರಂಗಡಿಯಲ್ಲಿ ಭರ್ಜರಿ ವಿಜಯೋತ್ಸವ ಆಚರಿಸಿದೆ. ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜಾ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ತಾಲೂಕ್ ಪಂಚಾಯತ್ ಸದಸ್ಯ ಮೈಕಲ್ ಡಿಸೋಜಾ, ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago