Featured

ಕಾಪು ಮೂಳೂರು ಹಿಂದು ರಕ್ಷಾ ವೆಲ್‌ ಫೇರ್ ಟ್ರಸ್ಟ್ : ಆಟಿ ಕಷಾಯ ವಿತರಣೆ

ಕಾಪು:  ಮೂಳೂರು ಹಿಂದು ರಕ್ಷಾ ವೆಲ್‌ ಫೇರ್ ಟ್ರಸ್ಟ್ ನ ವತಿಯಿಂದ ಆಟಿ ಅಮಾವಾಸ್ಯೆಯ ಪ್ರಯುಕ್ತ ಜುಲೈ 28 ರಂದು ಹಾಲೆ ಮರದ ತೊಗಟೆಯ ಕಷಾಯವನ್ನು ಸಿದ್ಧಪಡಿಸಿ ಸಾರ್ವಜನಿಕರಿಗೆ ಮತ್ತು ಗ್ರಾಮಸ್ಥರಿಗೆ ಉಚಿತವಾಗಿ ವಿತರಿಸಲಾಯಿತು.

ಹಿಂದು ರಕ್ಷಾ ವೆಲ್‌ಫೇರ್ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಧೀರೇಶ್ ಡಿ. ಪಿ. ಮಾತನಾಡಿ, ತುಳುನಾಡ ಸಂಸ್ಕೃತಿಯಲ್ಲಿ ಆಟಿ ಅಮಾವಾಸ್ಯೆ ಆಚರಣೆಯು ಧಾರ್ಮಿಕವಾಗಿ, ವೈಜ್ಞಾನಿಕವಾಗಿ ಅತ್ಯಂತ ಮಹತ್ವವನ್ನು ಪಡೆದಿದೆ. ಆಟಿ ಅಮಾವಾಸ್ಯೆಯ ದಿನ ಹಾಲೆ ಮರದ ತೊಗಟೆಯಲ್ಲಿ ಔಷಧೀಯ ಗುಣಧರ್ಮ ಹೆಚ್ಚಾಗಿರುವದನ್ನು ಸಂಶೋಧನೆಯ ಮೂಲಕ ಧೃಢಪಡಿಸಿದೆ. ಈ ಧಾರ್ಮಿಕ ಆಚರಣೆಯನ್ನು ನಿರಂತರವಾಗಿರಿಸುವ ಉದ್ದೇಶದಿಂದ ಕಳೆದ ನಾಲ್ಕು ವರ್ಷಗಳಿಂದ ಆಟಿ ಕಷಾಯ ವಿತರಿಸಿಕೊಂಡು ಬರಲಾಗುತ್ತಿದೆ ಎಂದರು.

ಮೂಳೂರು ಪಡು ಹಳೆ ಭಜನಾ ಮಂದಿರ ಮತ್ತು ಮಹಾಲಕ್ಷ್ಮೀ ನಗರದ ಬಳಿ ಬೆಳಿಗ್ಗೆ 6.00ರಿಂದ ಕಷಾಯದ ವಿತರಣೆ ಮಾಡಲಾಗಿದ್ದು, ಸರ್ವಧರ್ಮೀಯರ ಸಹಿತ ಸುಮಾರು 1,200ಕ್ಕೂ ಅಧಿಕ ಮಂದಿ ಹಾಳೆ ಮರದ ತೊಗಟೆಯಿಂದ ತಯಾರಿಸಿದ ಮದ್ದನ್ನು ಸ್ವೀಕರಿಸಿದರು. ಕೈಪುಂಜಾಲು, ಕಾಪು, ಪೊಲಿಪು, ಎರ್ಮಾಳು, ಉಚ್ಚಿಲ, ಪಣಿಯೂರು, ಮೂಳೂರು ಮತ್ತಿತರ ಪ್ರದೇಶಗಳಿಂದ ಆಗಮಿಸಿ ಮದ್ದು ಪಡೆದುಕೊಂಡಿದ್ದಾರೆ.
ಸ್ಥಳೀಯರಾದ ಸಂಜೀವ ಆರ್ ಅಮೀನ್ ಸಹಕಾರದೊಂದಿಗೆ ಟ್ರಸ್ಟ್ ನ ಸದಸ್ಯರು ಜೊತೆ ಸೇರಿ ಹಾಲೆ ಮರದ ಕೆತ್ತೆಯಿಂದ ಕಷಾಯವನ್ನು ಸಿದ್ಧಪಡಿಸಿದ್ದರು.

ಮೂಳೂರು ಹಿಂದು ರಕ್ಷಾ ವೆಲ್‌ಫೇರ್ ಟ್ರಸ್ಟ್ ನ ಅಧ್ಯಕ್ಷ ಚಂದ್ರಕಾಂತ್ ಕೆ. ಮೆಂಡನ್, ಗೌರವ ಸಲಹೆಗಾರ ಅಶೋಕ್ ಪುತ್ರನ್, ಉಪಾಧ್ಯಕ್ಷ ಪ್ರದೀಪ್ ಎಸ್. ಪುತ್ರನ್, ದಿನೇಶ್ ಪಾನಾರ, ಸಂಜೀವ ಅಮೀನ್, ಸುಖೇಶ್ ಡಿ,. ಪ್ರತೀಕ್ ಸುವರ್ಣ, ನಾಗೇಶ್, ಮಧುಕಿರಣ್ ಶ್ರೀಯಾನ್, , ಸುನಿಲ್ ಕರ್ಕೇರ, ಪತ್ರಕರ್ತರಾದ ಬಾಲಕೃಷ್ಣ ಪೂಜಾರಿ, ವಿಜಯ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

3 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

3 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

3 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

3 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

3 days ago