ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಕುತ್ಯಾರು ಪಂಚಾಯತ್ ವ್ಯಾಪ್ತಿಯ ಕಳತ್ತೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರಾಗಿದ್ದ ಪ್ರಸನ್ನ ಆಚಾರ್ಯ, ಪ್ರಶಾಂತ ಆಚಾರ್ಯ, ಶಾಂತ ಪೂಜಾರಿ ಹಾಗೂ ಡೇನಿಸ್ ಅವರು ಕಳತ್ತೂರು ಬೂತ್ ಅಧ್ಯಕ್ಷರ ನಾಮಫಲಕ ಅನಾವರಣ ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷದ ಧ್ವಜ ಸ್ವೀಕರಿಸಿ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಹಾಗೂ ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವ್ಯಕ್ತಿ ಪ್ರಾಧಿಕಾರ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ನವೀನ್ ಶೆಟ್ಟಿ ಕುತ್ಯಾರು, ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಸಂದೀಪ್ ಮಜೂರು, ಪಂಚಾಯತ್ ಅಧ್ಯಕ್ಷರಾದ ಲತಾ ಆಚಾರ್ಯ, ಪ್ರದೀಪ್ ರಾವ್ ಶಕ್ತಿಕೇಂದ್ರ ಪ್ರಮುಖ್ ಶಶಿಪ್ರಭಾ ಶೆಟ್ಟಿ ಮತ್ತಿತರರು ಬರಮಾಡಿಕೊಂಡರು.
ಬಳಿಕ ಮಾತನಾಡಿದ ಕಾರ್ಯಕರ್ತರು, ಯಾವುದೇ ಸ್ಥಾನಮಾನದ ಅಪೇಕ್ಷೆ ಇಲ್ಲದೆ ಪ್ರಧಾನಿ ಮೋದಿಜಿಯವರ ಕಾರ್ಯವೈಖರಿಗೆ ಮನಸೋತು ಬಿಜೆಪಿ ಸೇರ್ಪಡೆಗೊಳ್ಳುತ್ತಿದ್ದೇವೆ ಎಂದರು.
ಕಾಪುವಿನಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದ್ದು ಚುನಾವಣೆ ಸಂದರ್ಭದಲ್ಲಿ ಮತ್ತಷ್ಟು ಜನ ವಿವಿಧ ಪಕ್ಷಗಳಿಂದ ಸೇರ್ಪಡೆಗೊಳ್ಳಲು ಕಾಯುತ್ತಿದ್ದು ಪ್ರಧಾನಿ ಮೋದಿಜಿಯವರ ಕಾರ್ಯವೈಖರಿ, ರಾಜ್ಯದ ಮುಖ್ಯ ಮಂತ್ರಿಗಳ ಜನಪರ ಕಾರ್ಯವೈಖರಿ ಹಾಗೂ ಸ್ಥಳೀಯ ಶಾಸಕರುಗಳ ಕಾರ್ಯವೈಖರಿಗೆ ಮೆಚ್ಚಿ ಮುಂದಿನ ದಿನಗಳಲ್ಲಿ ಮತ್ತಷ್ಟು ಜನ ನಮ್ಮಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ತಿಳಿಸಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…