Featured

ಕಾಪು : ಯುವಕ ನಾಪತ್ತೆ ಪ್ರಕರಣ : ಪಡುಕರೆ ಸಮುದ್ರದಲ್ಲಿ ಮೃತದೇಹ ಪತ್ತೆ – vishwanews24

ಕಾಪು : ಯುವಕ ನಾಪತ್ತೆ ಪ್ರಕರಣ – ಪಡುಕರೆ ಸಮುದ್ರದಲ್ಲಿ ಮೃತದೇಹ ಪತ್ತೆ

ಕಾಪು :ಬೀಚ್‌ ಬಳಿ ಬೈಕ್‌, ಮೊಬೈಲ್‌, ಪರ್ಸ್ ಇಟ್ಟು ನಾಪತ್ತೆಯಾದ ಯುವಕನ ಮೃತದೇಹ ಕಡೆಕಾರು- ಪಡುಕೆರೆ ಬಳಿಯ ಸಮುದ್ರದಲ್ಲಿ ಶುಕ್ರವಾರ ಸಂಜೆ ವೇಳೆ ಪತ್ತೆಯಾಗಿದೆ.

ಮೃತ ಯುವಕನನ್ನು ಕಾಪು ಪಡುಗ್ರಾಮದ ಕರಣ್ ಸಾಲ್ಯಾನ್ (20) ಎಂದು ಗುರುತಿಸಲಾಗಿದೆ.

ಗುರುವಾರ ಸಂಜೆಯಿಂದ ಮನೆಯಿಂದ ನಾಪತ್ತೆ ಆಗಿದ್ದ ಕರಣ್ ಸಾಲ್ಯಾನ್ ಅವರ ಬೈಕು, ಮೊಬೈಲ್ ಹಾಗೂ ಪರ್ಸ್ ಕಾಪು ಲೈಟ್ ಹೌಸ್ ಬಳಿಯ ಶ್ರೀಯಾನ್ ಸದನ ಮನೆಯ ಬಳಿ ಶುಕ್ರವಾರ ಬೆಳಿಗ್ಗೆ ಪತ್ತೆಯಾಗಿತ್ತು. ಕಾಣೆಯಾದ ಬಗ್ಗೆ ತಂದೆ ತುಳಸಿ ಸಾಲ್ಯಾನ್‌ರವರು ಕಾಪು ಠಾಣೆಗೆ ನಾಪತ್ತೆ ದೂರು ಸಲ್ಲಿಸಿದ್ದರು.

ಕಾಣೆಯಾದ ಬೆನ್ನಲ್ಲೇ ಸ್ಥಳೀಯರು, ಈಜುಗಾರರು ಶುಕ್ರವಾರ ಬೆಳಗಿನಿಂದಲೇ ಕಾಪು ಸುತ್ತಮುತ್ತಲಿನ ಸಮುದ್ರದಲ್ಲಿ ಹುಡುಕಾಟ ನಡೆಸಿದ್ದು, ಸಂಜೆಯ ವೇಳೆ ಮಲ್ಪೆ ಬಳಿಯ ಪಡುಕೆರೆ ಕಡೆಕಾರು ಸಮುದ್ರದಲ್ಲಿ ಮೃತದೇಹ ತೇಲುತ್ತಿರುವ ಬಗ್ಗೆ ಮಾಹಿತಿ ದೊರಕಿದೆ. ಸ್ಥಳೀಯರು ಮೃತದೇಹವನ್ನು ಸಮುದ್ರದಿಂದ ಹೊರತೆಗೆದಿದ್ದಾರೆ. ಕಾಪುವಿನ ಸಮಾಜಸೇವಕ ಸೂರಿ ಶೆಟ್ಟಿಯವರು ಮೃತದೇಹವನ್ನು ಉಡುಪಿ ಅಜ್ಜರ ಕಾಡು ಆಸ್ಪತ್ರೆಗೆ ಸಾಗಿಸುವಲ್ಲಿ ಸಹಕರಿಸಿದರು.

ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕರಣ್ ಕುಟುಂಬಿಕರು ಘಟನಾ ಸ್ಥಳಕ್ಕೆ ತೆರಳಿ ಮೃತದೇಹದ ಗುರುತು ಪತ್ತೆ ಮಾಡಿದ್ದಾರೆ. ಈ ವೇಳೆ ಮನೆಯವರ ಆಕ್ರಂದನ ಮುಗಿಲು ಮುಟ್ಟಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

10 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

10 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

11 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

14 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

14 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

14 hours ago