ಕಾಪು : ಕಾರೊಂದು ರಸ್ತೆ ಬದಿಯ ಮೈಲುಗಲ್ಲು ಹಾಗೂ ಸ್ಕೂಟರ್‌ಗೆ ಢಿಕ್ಕಿ ಹೊಡೆದ ಘಟನೆ ಕಟಪಾಡಿ ಸಮೀಪದ ಫಾರೆಸ್ಟ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು, ಅತೀ ವೇಗದಿಂದ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯ ಮೈಲುಗಲ್ಲಿಗೆ ಢಿಕ್ಕಿ ಹೊಡೆದು ಅಲ್ಲೇ ಸಮೀಪ ರಸ್ತೆ ಬದಿ ನಿಲ್ಲಿಸಿದ ಇಲೆಕ್ಟ್ರಿಕ್ ಸ್ಕೂಟರ್ ಗೂ ಢಿಕ್ಕಿ ಹೊಡೆದು ಪಲ್ಟಿಯಾಗಿದೆ.
ಅಪಘಾತದ ರಭಸಕ್ಕೆ ರಸ್ತೆ ಬದಿ ಮೈಲಿಗಲ್ಲು ಕಿತ್ತು ಬಂದಿದ್ದು, ಸ್ಕೂಟರ್ ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರು ಚಾಲಕ ಗಂಗೊಳ್ಳಿಯ ಮುಹಮ್ಮದ್ ಝೈನ್ ಗಾಯಗೊಂಡಿರುವ ಬಗ್ಗೆ ತಿಳಿದುಬಂದಿದೆ.
ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…