Featured

ಕಾಪು : ರಸ್ತೆ ಬದಿ ನಿಂತಿದ್ದ ವೇಳೆ  ಕಾರು ಢಿಕ್ಕಿ ; ಖಾಸಗಿ ಬಸ್ ಮಾಲಕ ಸಾವು – Vishwanews24

ಕಾಪು : ರಸ್ತೆ ಬದಿ ನಿಂತಿದ್ದ ವೇಳೆ  ಕಾರು ಢಿಕ್ಕಿ  ; ಖಾಸಗಿ ಬಸ್ ಮಾಲಕ ಸಾವು

ಕಾಪು :ರಸ್ತೆ ಬದಿ ನಿಂತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್ ಮಾಲಕ ಮೃತಪಟ್ಟ ಘಟನೆ ಕಾಪು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಕಾಪು ಮಹಾವೀರ್‌ ಬಸ್‌ನ ಮಾಲಕ, ಜೈನ ಬಸದಿ ಮನೆಯ ಮಹೇಂದ್ರ ಕುಮಾರ್‌ ಇಂದ್ರ (60) ಮೃತಪಟ್ಟವರು.. ಮಂಗಳವಾರ ರಾತ್ರಿ ಸುಮಾರು 7 ಗಂಟೆ ವೇಳೆಗೆ ತಮ್ಮ ಮನೆಗೆ ಹೋಗಲು ಕಾಪು ಪೆಟ್ರೋಲ್ ಬಂಕ್ ಬಳಿ ನಿಂತಿದ್ದಾಗ ಉಡುಪಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಕಾರು ಅವರಿಗೆ ಢಿಕ್ಕಿ ಹೊಡೆದಿದೆ. ಮನೆ ಸಮೀಪದಲ್ಲೇ ಈ ಅಪಘಾತ ಸಂಭವಿಸಿದ್ದು, ಅವರ ಸಹೋದರ ಮನೆಯ ಹೊರಗೆ ಬಂದು ನೋಡಿದಾಗ ಈ ವಿಚಾರ ತಿಳಿದಿದೆ. ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.

ಕಳೆದ ಸುಮಾರು ನಾಲ್ಕು ದಶಕಗಳಿಂದ ಬಸ್ ಮಾಲಕರಾಗಿ ಮಹೇಂದ್ರಕುಮಾರ್ ಸೇವೆ ಸಲ್ಲಿಸಿದ್ದರು. ಸಹೋದರ ಕಾಪು ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದ್ದು, ಅಪಘಾತಕ್ಕೆ ಕಾರಣವಾದ ಚಾಲಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

 

 

Vishwa News 24

Recent Posts

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 minutes ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

10 minutes ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

23 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

23 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

24 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

1 day ago